ಗಂಭೀರ ಆರೋಪ ಮಾಡಿ ಗಂಡ, ಮಾವನ ವಿರುದ್ಧವೇ ಪೊಲೀಸ್​ ಠಾಣೆಯ ಮೆಟ್ಟಿಲೇರಿದ ನಟಿ ಚೈತ್ರಾ ಹಳ್ಳಿಕೇರಿ

Chaitra Hallikeri
Published on

ಮೈಸೂರು‌: ಬ್ಯಾಂಕ್​ ಖಾತೆ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಪತಿ ಮತ್ತು ಮಾವನ ವಿರುದ್ಧವೇ ನಟಿ ಚೈತ್ರಾ ಹಳ್ಳಿಕೇರಿ ದೂರು ದಾಖಲಿಸಿದ್ದಾರೆ.

ನನ್ನ ಅನುಮತಿ ಇಲ್ಲದೆ ಗೋಲ್ಡ್ ಲೋನ್ ಪಡೆದಿದ್ದಾರೆ ಎಂದು ಆರೋಪಿಸಿ ಗಂಡ ಬಾಲಾಜಿ ಪೋತರಾಜ್ ಹಾಗೂ ಮಾವ ಪೋತರಾಜ್ ವಿರುದ್ಧ ಮೈಸೂರಿನ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಗೆ ಚೈತ್ರಾ ಹಳ್ಳಿಕೇರಿ ದೂರು ಸಲ್ಲಿಸಿದ್ದಾರೆ.

ನನ್ನ ಸಹಿಯನ್ನು ಪೋರ್ಜರಿ‌ ಮಾಡಿ ಗೋಲ್ಡ್ ಲೋನ್​ ಪಡೆದಿದ್ದಾರೆ. ಬ್ಯಾಂಕ್ ಮ್ಯಾನೇಜರ್ ಕೂಡ ಇದರಲ್ಲಿ ಶಾಮೀಲಾಗಿದ್ದಾರೆ. ನನಗೆ ವಂಚನೆ ಮಾಡಿ ಜೀವ ಬೆದರಿಕೆ ಹಾಕಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಮೂರು ದಿನಗಳ ಹಿಂದೆಯೇ ಚೈತ್ರಾ ಹಳ್ಳಿಕೇರಿ ದೂರು ನೀಡಿದ್ದಾರೆ. ಈ ಸಂಬಂಧ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಅಂದಹಾಗೆ ಚೈತ್ರಾ ಹಳ್ಳಿಕೇರಿ ಅವರು ಗುನ್ನ, ಶಿಷ್ಯ, ಖುಷಿ ಹಾಗೂ ಗೌಡ್ರು ಸೇರಿದಂತೆ ಒಂದಿಷ್ಟು ಕನ್ನಡ ಸಿನಿಮಾಗಳಲ್ಲಿ ನಟನೆ ಮಾಡಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net