ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರ ಸಾವು, 30 ಅಡಿ ದೂರ ಬಿದ್ದು ಚಾಲಕ ದುರ್ಮರಣ

Accident
Published on

ಆನೇಕಲ್: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ದಾರುಣ ಸಾವಿಗೀಡಾಗಿರುವ ಘಟನೆ ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ತಮಿಳುನಾಡು ಹೊಸೂರಿನಲ್ಲಿ ನಡೆದಿದೆ.

ಹೊಸೂರು ಸಮೀಪದ ಸೂಳಗಿರಿ ಎಚ್.ಪಿ ಪೆಟ್ರೋಲ್ ಬಂಕ್ ಎದುರು ಅಪಘಾತ ಸಂಭವಿಸಿದೆ. ಮೃತರನ್ನು ಬೆಂಗಳೂರಿನ ವೈಯಾಲಿಕಾವಲ್ ನಿವಾಸಿ ಸುಮಂತ್ (21) ಮತ್ತು ಕೋರಮಂಗಲ ನಿವಾಸಿ ವಿನ್ಸೆಂಟ್ ಗೋಪಿ (34) ಎಂದು ಗುರುತಿಸಲಾಗಿದೆ.

ಹೈವೇಯಲ್ಲಿ ಬರುತ್ತಿದ್ದ ಇಂಡಿಕಾ ಕಾರಿಗೆ ರಾಂಗ್ ರೂಟ್​ನಲ್ಲಿ ಬಂದ ಮತ್ತೊಂದು ಕಾರು ಡಿಕ್ಕಿ ಹೊಡೆದಿದೆ. ಮೃತದೇಹಗಳನ್ನು ಹೊಸೂರು ಸರ್ಕಾರಿ ಆಸ್ಪತ್ರೆಗೆ ರವಾನನಿಸಲಾಗಿದೆ. ಡಿಕ್ಕಿಯ ರಭಸಕ್ಕೆ ಸಮಂತ್​ ಎಂಬ ಕಾರು ಚಾಲಕ 30 ಅಡಿ ದೂರ ಹೋಗಿ ಬಿದ್ದು ಮೃತಪಟ್ಟಿದ್ದಾರೆ.

ರಾಂಗ್ ರೂಟಲ್ಲಿ ಬಂದಿದ್ದೆ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಹೈವೇಯಲ್ಲಿ ವಿರುದ್ಧ ದಿಕ್ಕಿನಲ್ಲಿ ಚಲಾಯಿಸಿಕೊಂಡು ಬಂದಿದ್ದ ಸ್ಕೋಡಾ ಕಾರು ಕೃಷ್ಣಗಿರಿಯಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಕಾ ಕಾರಿಗೆ ಡಿಕ್ಕಿ ಹೊಡೆದಿದೆ. ಎರಡು ಕಾರುಗಳು ಹೆದ್ದಾರಿಯಲ್ಲಿ ವೇಗವಾಗಿ ಬಂದಿದ್ದರಿಂದ ಸಂಪೂರ್ಣ ಛಿದ್ರವಾಗಿವೆ. ಎರಡು ಕಾರಿನಲ್ಲೂ ಚಾಲಕರು ಮಾತ್ರ ಪ್ರಯಾಣ ಮಾಡುತ್ತಿದ್ದರು.

ಘಟನಾ ಸ್ಥಳಕ್ಕೆ ಸೂಳಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net