ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್​ ಸರ್ಕಾರ ಪತನ: ಆರ್​.ಅಶೋಕ್​

r ashoka
Published on

ಚಿಕ್ಕಮಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವುದು ಸಮ್ಮಿಶ್ರ ಸರ್ಕಾರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಕರ್ನಾಟಕದಲ್ಲಿ ಕಾಂಗ್ರೆಸ್​ ಸರ್ಕಾರ ಪೊತನವಾಗುವುದು ನಿಶ್ಚಿತ ಎಂದು ಮಾಜಿ ಸಚಿವ ಆರ್​.ಅಶೋಕ್​ ಭವಿಷ್ಯ ನುಡಿದಿದ್ದಾರೆ.

ಚಿಕ್ಕಮಗಳೂರಿನಲ್ಲಿ ಈ ಕುರಿತು ಮಾತನಾಡಿದ ಆರ್.ಅಶೋಕ್​ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್​ ಇಬ್ಬರೂ ಸೇರಿ ಸಮ್ಮಿಶ್ರ ಸರ್ಕಾರವನ್ನು ರಚಿಸಿದ್ದಾರೆ. ಇತ್ತೀಚಿಗೆ ಇದೇನು ಸಮ್ಮಿಶ್ರ ಸರ್ಕಾರವೇ ಎಂದು ಪ್ರಶ್ನಿಸುವ ಮೂಲಕ ಸಿದ್ದರಾಮಯ್ಯನವರೇ ಈ ವಿಚಾರವನ್ನು ಒಪ್ಪಿಕೊಂಡಿದ್ದಾರೆ.

ಮುಖ್ಯಮಂತ್ರಿಗಳಾದವರು ಮಾಜಿ ಸಿಎಂಗಳನ್ನು ಭೇಟಿ ಮಾಡುವುದು ವಾಡಿಕೆ. ಆದರೆ, ಡಿಸಿಎಂ ಡಿಕೆ. ಶಿವಕುಮಾರ್​ ಎಸ್​.ಎಂ.ಕೃಷ್ಣ, ಎಚ್​.ಡಿ.ದೇವೇಗೌಡ, ಬಸವರಾಜ್​ ಬೊಮ್ಮಾಯಿ ಅವರನ್ನು ಭೇಟಿ ಮಾಡುವ ಮೂಲಕ ತಾವೇ ಮುಖ್ಯಮಂತ್ರಿ ಎಂಬಂತೆ ವರ್ತಿಸುತ್ತಿದ್ಧಾರೆ. ಈ ಇಬ್ಬರು ನಾಯಕರ ಜಗಳ ಬೀದಿಗೆ ಬಂದರೆ ಸರ್ಕಾರ ಪತನವಾಗುವುದು ನಿಶ್ಚಿತ ಎಂದು ಹೇಳಿದ್ಧಾರೆ.

R Ashok DK Siddu

ಹುದ್ದೆ ಖಾಲಿ ಇಲ್ಲ

ರಾಜ್ಯಾಧ್ಯಕ್ಷರ ಬದಲಾವಣೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ ಸದಯಕ್ಕೆ ಆ ಸ್ಥಾನ ಖಾಲಿ ಇಲ್ಲ. ಸೋಮಣ್ಣ ಅವರ ಹೇಳಿಕೆ ಬಗ್ಗೆ ನನನಗೆ ತಿಳಿದಿಲ್ಲ. ರಾಜ್ಯ ಘಟಕದ ಅಧ್ಯಕ್ಷರಾಗಿ ಕಟೀಲ್​ ಅವರೇ ಮುಂದುವರೆಯಲಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಪಕ್ಷ ಸಂಘಟನೆ ಮಾಡುತ್ತಿದ್ದೇವೆ.

ವಿಧಾನಸಭೆ ಅಧಿವೇಶನ ಆರಂಭ್ಕಕೂ ಮುನ್ನ ವಿರೋಧ ಪಕ್ಷದ ನಾಯಕನ ಆಯ್ಕೆಯಾಗಲಿದೆ ಎಂದು ಚಿಕ್ಕಮಗಳೂರಿನಲ್ಲಿ ಮಾಜಿ ಸಚಿವ ಆರ್​.ಅಶೋಕ್​ ತಿಳಿಸಿದ್ಧಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net