

ಮಂಗಳೂರು : ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ದ.ಕ.ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ಬಿಜೆಪಿ ಪ್ರಮುಖರ ಜತೆ ಸಭೆ ನಡೆಸಿ ಆ.3ರಂದು ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆಯ ಬಗ್ಗೆ ಮಾಹಿತಿ ನೀಡಿದರು.
ಆಕ್ರಮವಾಗಿ ಕೋಟ್ಯಾಂತರ ರೂ.ಬೆಲೆಬಾಳುವ ನಿವೇಶನಗಳನ್ನು ತಮ್ಮ ಕುಟುಂಬದವರ ಹೆಸರಿನಲ್ಲಿ ನೋಂದಣಿ ಮಾಡಿರುವ
ಸಿದ್ದರಾಮಯ್ಯ ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರಿಯಲು ಯಾವ ಯೋಗ್ಯತೆಯೂ ಉಳಿದಿಲ್ಲ .ಅವರ ರಾಜೀನಾಮೆ ಒತ್ತಾಯಿಸಿ ಬಿಜೆಪಿ ಕರ್ನಾಟಕ ಈ ಪಾದಯಾತ್ರೆ ಹಮ್ಮಿಕೊಂಡಿದೆ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಮಾತನಾಡಿ ಪಾದಯಾತ್ರೆಯಲ್ಲಿ ದಕ್ಷಿಣ ಕನ್ನಡದ 5 ಸಾವಿರ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದರು. ಮೈಸೂರು ಚಲೋ ಕಾರ್ಯಕ್ರಮದ ಜಿಲ್ಲಾ ಸಂಚಾಲಕರಾಗಿ ವಿಕಾಸ್ ಪಿ. ಹಾಗೂ ಸಹ ಸಂಚಾಲಕರಾಗಿ ಈಶ್ವರ ಕಟೀಲ್ ಅವರನ್ನು ನೇಮಕಗೊಳಿಸಲಾಯಿತು.
ಶಾಸಕರಾದ ಡಿ.ವೇದವ್ಯಾಸ ಕಾಮತ್, ಉಮಾನಾಥ್ ಕೋಟ್ಯಾನ್, ಎಂಎಲ್‌ಸಿ ಪ್ರತಾಪಸಿಂಹ ನಾಯಕ್, ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಯತೀಶ್ ಅರ್ವಾರ್, ಕಿಶೋರ್ ಕುಮಾರ್ ಬೊಟ್ಯಾಡಿ, ಜಿಲ್ಲಾ ಜೆಡಿಎಸ್ ಅಧ್ಯಕ್ಷ
ಜಾಕೆ ಮಾಧವ ಗೌಡ, ಬಿಜೆಪಿಯ ವಿವಿಧ ಮೋರ್ಚಾಗಳ ಅಧ್ಯಕ್ಷರಾ ನಂದನ್ ಮಲ್ಯ, ಮಂಜುಳಾ ಅನಿಲ್ ರಾವ್, ಮಹೇಶ್ ಜೋಗಿ, ಗಣೇಶ್ ಗೌಡ ನಾವೂರು, ಯುವ ಜನತಾ ದಳದ ಜಿಲ್ಲಾಧ್ಯಕ್ಷರಾದ ಅಕ್ಷಿತ್ ಸುವರ್ಣ ಉಪಸ್ಥಿತರಿದ್ದರು.