ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ಬುದ್ಧಿಮಾತು ಹೇಳಿದ ಕಂದಾಯ ಸಚಿವ ಆರ್​. ಅಶೋಕ್​!

Ashok 1
Published on

ಮೈಸೂರು: ಜನಪ್ರತಿನಿಧಿಗಳ ಜತೆ ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ತಿಳಿಸಿದ್ದೇನೆಂದು ಕಂದಾಯ ಸಚಿವ ಆರ್​. ಅಶೋಕ್​ ಹೇಳಿದರು.

ಡಿಸಿ ರೋಹಿಣಿ ಸಿಂಧೂರಿ ಜನಪ್ರತಿನಿಧಿಗಳ ಗುದ್ದಾಟ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿ, ನಿನ್ನೆ ಜಿಲ್ಲಾಧಿಕಾರಿ ನನ್ನನ್ನು ಭೇಟಿ ಮಾಡಿದ್ದರು. ಈ ವೇಳೆ ಜನಪ್ರತಿನಿಧಿಗಳ ಜತೆ ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ತಿಳಿಸಿದ್ದೇನೆ. ಜನಸ್ಪಂದನಾ ಕಾರ್ಯಕ್ರಮದ ಉದ್ಘಾಟನೆಗೆ ಶಾಸಕರನ್ನು ಕರೆಯಲೇಬೇಕು ಎಂದು ಸೂಚಿಸಿದ್ದೇನೆ ಎಂದರು.

ಜನಸ್ಪಂದನಾ ಕಾರ್ಯಕ್ರಮವನ್ನೇ ಸಚಿವರು ರದ್ದುಗೊಳಿಸಿದ್ದು, ಈಗ ಜನಸ್ಪಂದನ ಕಾರ್ಯಕ್ರಮ ಇರುವುದಿಲ್ಲ. ಮುಂದಿನ ದಿನದಲ್ಲಿ ಜಿಲ್ಲಾಧಿಕಾರಿಗಳ ನಡಿಗೆ ಗ್ರಾಮದ ಕಡೆಗೆ ಕಾರ್ಯಕ್ರಮ ನಡೆಯಲಿದೆ. ಇದಕ್ಕೆ ಮಾರ್ಗಸೂಚಿಗಳನ್ನು ಸಿದ್ದಪಡಿಸಲಾಗುತ್ತಿದೆ. ಈ ವೇಳೆ ಜನರ ಅಹವಾಲುಗಳನ್ನು ಕೇಳಲಾಗುತ್ತದೆ. ಈ ಬೆಳವಣಿಗೆಯಿಂದ ಸಾರ್ವಜನಿಕರಿಗೆ ಅನಾನೂಕೂಲವಾಗಿದೆ. ಇದನ್ನು ನಾನು ಒಪ್ಪುತ್ತೇನೆಂದರು.

ಸಂತೋಷ್ ಆತ್ಮಹತ್ಯೆ ಯತ್ನ ವಿಚಾರದಲ್ಲಿ ರಹಸ್ಯ ಸಿಡಿ ಪ್ರಸ್ತಾಪ ಕುರಿತು ಮಾತನಾಡಿದ ಅಶೋಕ್​, ಡಿಕೆಶಿ ಯಾವಾಗಲೂ ಗಾಳಿಯಲ್ಲೇ ಗುಂಡು ಹಾರಿಸೋದು. ಉಪಚುನಾವಣೆ ಬಳಿಕ ಡಿಕೆಶಿಗೆ ಅಸ್ತಿತ್ವದ ಪ್ರಶ್ನೆ ಬಂದಿದೆ. ಸಂತೋಷ್ ವಿಚಾರದಲ್ಲೂ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆಂದು ಡಿಕೆಶಿಗೆ ಟಾಂಗ್ ನೀಡಿದರು. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net