ಮದರಸಾಗಳಲ್ಲಿ ಶಿಕ್ಷಣ ಇಲಾಖೆ ಪಠ್ಯಕ್ಕೆ ಬೇಡಿಕೆ: ಸಚಿವ ಬಿ.ಸಿ.ನಾಗೇಶ್ ಹೇಳಿಕೆ

nagesh bc
Published on

ಬೆಂಗಳೂರು: ಶಿಕ್ಷಣ ಇಲಾಖೆಯ ಪಠ್ಯವನ್ನು ಮದರಸಾಗಳಲ್ಲಿ ಅಳವಡಿಸಲು ಪೋಷಕರು ಮನವಿ ಮಾಡಿದ್ದಾರೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದರು.

ವಿಧಾನಸೌಧದದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮದರಸಾಗಳಲ್ಲಿ ಶಿಕ್ಷಣ ಇಲಾಖೆಯ ಪಠ್ಯಕ್ರಮ ಅಳವಡಿಕೆಗೆ ಮದರಸಾಗಳಿಂದ ಬೇಡಿಕೆ ಬಂದಿಲ್ಲ. ಆದರೆ ಪೋಷಕರು ಮದರಸಾ ಶಿಕ್ಷಣದಿಂದ ನಮ್ಮ ಮಕ್ಕಳು ಇವತ್ತಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಬದುಕಲು ಆಗುವುದಿಲ್ಲ. ಸ್ಪರ್ಧಾತ್ಮಕ ಪರೀಕ್ಷೆ ಬರೆಯುವುದು ಕಷ್ಟ ಆಗುತ್ತಿದೆ. ವೃತ್ತಿಪರ ಕೋರ್ಸ್ ಪಡೆದುಕೊಳ್ಳುವುದು ಕಷ್ಟ. ಬೇರೆ ಮಕ್ಕಳಿಗೆ ‌ಕೊಟ್ಟ ಹಾಗೆ ಶಿಕ್ಷಣ ಕೊಡಿ ಎಂಬ ಮನವಿ ಮಾಡಿದ್ದಾರೆ ಎಂದರು‌.

ಆದರೆ ಮದರಸಾ ಕಡೆಯಿಂದ ಹಾಗೂ ಅಲ್ಪಸಂಖ್ಯಾತ ಇಲಾಖೆಯಿಂದ ಯಾವುದೇ ಮನವಿ ಬಂದಿಲ್ಲ. ಪೋಷಕರೇನೂ ಅಧಿಕೃತವಾಗಿ ಮನವಿ ಮಾಡಿಲ್ಲ ಎಂದು ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net