ಮನೆ ಮುಂದೆ ವ್ಹೀಲಿಂಗ್ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಯುವಕನನ್ನು ಬರ್ಬರ ಹತ್ಯೆ ಮಾಡಿದ ದುಷ್ಕರ್ಮಿಗಳು

Wheeling
Published on

ಬೆಂಗಳೂರು: ಮನೆಯ ಮುಂದೆ ವ್ಹೀಲಿಂಗ್ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಆರು ಆರೋಪಿಗಳನ್ನು ಕೆ.ಪಿ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ.

ಥಾಮಸ್ ಕೊಲೆಯಾದ ಯುವಕ. ಸೂರ್ಯ ಅಲಿಯಾಸ್​ ಸೂರಿ, ಚಂದನ್, ಪ್ರಮೋದ್, ಯಶವಂತ್, ಚೇತನ್ ಸೇರಿ ಆರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು ಥಾಮಸ್ ಮನೆ ಮುಂದೆ ವ್ಹೀಲಿಂಗ್ ಮಾಡುತ್ತಿದ್ದರು. ಈ ವಿಚಾರವಾಗಿ ಆರೋಪಿ ಸೂರಿ ಗ್ಯಾಂಗ್ ವಿರುದ್ಧ ಥಾಮಸ್​ ಆಕ್ರೋಶ ವ್ಯಕ್ತಪಡಿಸಿದ್ದ.

ಆರೋಪಿ ಗ್ಯಾಂಗ್​ ಕೂಡ ಎರಡು ಬಾರಿ ಥಾಮಸ್​ಗೆ ವಾರ್ನ್ ಮಾಡಿತ್ತು. ನಂತರ ಮತ್ತೆ ವ್ಹೀಲಿಂಗ್ ಹಾವಳಿ ಮುಂದುವರಿಸಿದ್ದರು. ಮತ್ತೆ ಈ ಬಗ್ಗೆ ಪ್ರಶ್ನಿಸಿದ್ದಕ್ಕೆ ಕಳೆದ ವಾರ ಥಾಮಸ್​ನನ್ನು ಆರೋಪಿಗಳು ಬರ್ಬರವಾಗಿ ಹತ್ಯೆ ಮಾಡಿದ್ದರು.

ಸದ್ಯ ಈ ಪ್ರಕರಣ ಸಂಬಂಧ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಉಳಿದ ಮೂವರು ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಕೆ.ಪಿ. ಅಗ್ರಹಾರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net