ರಾಜ್ಯಸಭಾ ಚುನಾವಣೆ: ಬಿಜೆಪಿಯಿಂದ ನಿರ್ಮಲಾ ಸೀತಾರಾಮನ್ ನಾಮಪತ್ರ ಸಲ್ಲಿಕೆ, ಸಿಎಂ, ಮಾಜಿ ಸಿಎಂ ಸಾಥ್​

Nirmala
Published on

ಬೆಂಗಳೂರು: ಜೂನ್ 10 ರಂದು ರಾಜ್ಯದಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ನಿರ್ಮಲಾ ಸೀತಾರಾಮನ್ ಇಂದು (ಮೇ.31) ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವರುಗಳಾದ ಮಾಧುಸ್ವಾಮಿ, ಆರ್.ಅಶೋಕ್, ಮುನಿರತ್ನ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಉಪಸ್ಥಿತರಿದ್ದರು.

ಬಿಎಸ್​ವೈ ಮಾತನಾಡಿ ನಮ್ಮೆಲ್ಲರ ಭಾವನೆಗೆ ಗೌರವ ಕೊಟ್ಟು ನಿರ್ಮಲಾ ಸೀತಾರಾಮನ್ ಅವರಿಗೆ ಅವಕಾಶ ಕೊಟ್ಟಿದಾರೆ. ಅದಕ್ಕಾಗಿ ಪ್ರಧಾನಿ ಮೋದಿ ಅವರಿಗೆ ಅಭಿನಂದನೆ ಸಲ್ಲಿಸ್ತೇನೆ. ನಿರ್ಮಲಾ ಸೀತಾರಾಮನ್ ಹಾಗೂ ಜಗ್ಗೇಶ್ ಇಬ್ಬರು ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ಮೂರನೇ ಅಭ್ಯರ್ಥಿಯಾಗಿ ಲೆಹರ್ ಸಿಂಗ್ ಕಣಕ್ಕಿಳಿಸಿದ್ದೇವೆ. ಅವರನ್ನೂ ಗೆಲ್ಲಿಸೋ ಪ್ರಯತ್ನ ಮಾಡ್ತಿದ್ದೇವೆ ಎಂದರು.

Koo App
ರಾಜ್ಯಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ಕರ್ನಾಟಕದಿಂದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳಾಗಿರುವ ಕೇಂದ್ರ ವಿತ್ತ ಸಚಿವೆ ಶ್ರೀಮತಿ @nsitharaman ಹಾಗೂ ಮಾಜಿ ಶಾಸಕ ಶ್ರೀ @Jaggesh2 ಅವರಿಗೆ ಅಭಿನಂದನೆಗಳು. @BJP4Karnataka-BS Yediyurappa (@bsybjp)30 May 2022
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net