

ಬೆಂಗಳೂರು: ನಡು ರಸ್ತೆಯಲ್ಲೇ ವಿದ್ಯಾರ್ಥಿನಿಯರು ಕೈ ಕೈ ಮಿಲಾಯಿಸಿದ ಘಟನೆ ನಗರದ ಸೆಂಟ್ ಮಾರ್ಕ್ಸ್ ರಸ್ತೆಯಲ್ಲಿ ನಡೆದಿದೆ. ಖಾಸಗಿ ಶಾಲಾ ಬಾಲಕಿಯರ ಜಡೆ ಜಗಳದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸುಮಾರು 20 ವಿದ್ಯಾರ್ಥಿನಿಯರು ನಡು ರಸ್ತೆಯಲ್ಲೇ ಬಡಿದಾಡಿಕೊಂಡಿದ್ದಾರೆ. ಗಲಾಟೆಯಲ್ಲಿ ವಿದ್ಯಾರ್ಥಿನಿಯರ ಪೋಷಕರು ಸಹ ಭಾಗಿಯಾಗಿದ್ದರು. ನಡುರಸ್ತೆಯಲ್ಲಿ ಜಡೆ ಜಗಳದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಗಲಾಟೆಗೆ ಕಾರಣ ಏನು ಎಂಬುದು ಇನ್ನು ತಿಳಿದು ಬಂದಿಲ್ಲ. ಈ ಸಂಬಂಧ ಪೊಲೀಸ್ ಠಾಣೆಯಲ್ಲೂ ಯಾವುದೇ ರೀತಿ ಕೇಸ್ ದಾಖಲಾಗಿಲ್ಲ. ಅಶೋಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. (ದಿಗ್ವಿಜಯ ನ್ಯೂಸ್)