ಮನೆಯವರು ಮದುವೆಗೆ ನಿರಾಕರಿಸಿದ್ದಕ್ಕೆ ಮನನೊಂದು ಸಾವಿನ ಹಾದಿ ಹಿಡಿದ ಪ್ರೇಮಿಗಳು

Death
Published on

ಬೀದರ್: ಮನೆಯವರು ಮದುವೆಗೆ ನಿರಾಕರಿಸಿದ್ದಕ್ಕೆ ಮನನೊಂದು ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್​ ನಗರದಲ್ಲಿ ಸೋಮವಾರ ರಾತ್ರಿ ನಡೆದಿದೆ.

ಶರತ್ (28) ಹಾಗೂ ಸಂಗೀತಾ (26) ಆತ್ಮಹತ್ಯೆಗೆ ಶರಣಾದವರು. ಇಬ್ಬರು ಸಹ ಲಾಡಗೇರಿ ಬಡಾವಣೆಯ ನಿವಾಸಿಗಳು.

ಇಬ್ಬರು ಕೆಲ ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇತ್ತೀಚೆಗೆ ಸಂಗೀತಾ ನಿಶ್ಚಿತಾರ್ಥ ಬೇರೊಂದು ಹುಡುಗನ ಜತೆ ನಡೆದಿತ್ತು. ಶೀಘ್ರದಲ್ಲಿ ಮದುವೆ ಸಹ ನಡೆಯಬೇಕಿತ್ತು. ಈ ಹಿನ್ನೆಲೆ ಮನನೊಂದು ಶರತ್ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದ. ಪ್ರೀಯಕರನ ಸಾವಿನ ಸುದ್ದಿ ಕೇಳಿ ಸಂಗೀತಾ ತನ್ನ ಮನೆಯಲ್ಲಿನ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಘಟನೆಯಯಿಂದ ಎರಡು ಕುಟುಂಗಳ ಸದಸ್ಯರು ಕಂಗಾಲಾಗಿದ್ದಾರೆ. ಗಾಂಧಿಗಂಜ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net