ಬಿಜೆಪಿ ಸರ್ಕಾರದ ಭ್ರಷ್ಟಾಚಾರ ನಿಗ್ರಹಕ್ಕೆ ಸಹಾಯವಾಣಿ ತೆರೆದ ಕಾಂಗ್ರೆಸ್!

Congress
Published on

ಬೆಂಗಳೂರು: ಬಿಜೆಪಿ ನೇತೃತ್ವದ ಸರ್ಕಾರದ ಭ್ರಷ್ಟಾಚಾರವು ನಿಮ್ಮನ್ನೂ ಬಾಧಿಸಿದ್ದರೆ ಮಾಹಿತಿ ನೀಡುವಂತೆ ರಾಜ್ಯ ಕಾಂಗ್ರೆಸ್​ ಸಹಾಯವಾಣಿಯನ್ನು ತೆರೆದಿದೆ.

ಈ ಬಗ್ಗೆ ಕರ್ನಾಟಕ ಕಾಂಗ್ರೆಸ್​ ಕೂ ಮಾಡಿದ್ದು, ಬಿಜೆಪಿ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರದ ಬಗ್ಗೆ ಅಧಿವೇಶನದ ಒಳಗೆ ಹಾಗೂ ಹೊರಗೆ ಸಾರ್ವಜನಿಕವಾಗಿ ಚರ್ಚೆ ನಡೆಸುತ್ತೇವೆ. ಬೆಂಗಳೂರು ನಗರ ಐಟಿ ಕ್ಯಾಪಿಟಲ್, ಗಾರ್ಡನ್ ಸಿಟಿ, ಸಿಲಿಕಾನ್ ಸಿಟಿ ಎಂಬ ಖ್ಯಾತಿ ಪಡೆದಿತ್ತು. ಆದರೆ ಈಗ ನಮ್ಮ ರಾಜ್ಯ ದೇಶದ ಭ್ರಷ್ಟಾಚಾರದ ರಾಜಧಾನಿ ಎಂದು ಕುಖ್ಯಾತಿ ಪಡೆಯುತ್ತಿದೆ

Koo App
ಬಿಜೆಪಿ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರದ ಬಗ್ಗೆ ಅಧಿವೇಶನದ ಒಳಗೆ ಹಾಗೂ ಹೊರಗೆ ಸಾರ್ವಜನಿಕ ಚರ್ಚೆ ನಡೆಸುತ್ತೇವೆ. ಬೆಂಗಳೂರು ನಗರ ಐಟಿ ಕ್ಯಾಪಿಟಲ್, ಗಾರ್ಡನ್ ಸಿಟಿ, ಸಿಲಿಕಾನ್ ಸಿಟಿ ಎಂಬ ಖ್ಯಾತಿ ಪಡೆದಿತ್ತು. ಆದರೆ ಈಗ ನಮ್ಮ ರಾಜ್ಯ ದೇಶದ ಭ್ರಷ್ಟಾಚಾರದ ರಾಜಧಾನಿ ಎಂದು ಕುಖ್ಯಾತಿ ಪಡೆಯುತ್ತಿದೆ! -@DKShivakumar #40PERCENTSARKAR
View attached media content
-ಕರ್ನಾಟಕ ಕಾಂಗ್ರೆಸ್ (@inckarnataka)14 Sep 2022

ರಾಜ್ಯದಲ್ಲಿರುವ ಭ್ರಷ್ಟ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಲೇ ಬೇಕಿದೆ. ಅದಕ್ಕಾಗಿ ಜನಜಾಗೃತಿ ಮೂಡಿಸುತ್ತಿದ್ದು, ಬಿಜೆಪಿ ಸರ್ಕಾರದ ಭ್ರಷ್ಟಾಚಾರ ನಿಮ್ಮನ್ನೂ ಬಾಧಿಸಿದ್ದರೆ, ನಮ್ಮ ಸಹಾಯವಾಣಿ ಸಂಖ್ಯೆ 8447704040ಗೆ ಕರೆ ಅಥವಾ ವಾಟ್ಸಪ್ ಮಾಡಿ. ಹಾಗೇ 40percentsarkaara.com ವೆಬ್ ಸೈಟ್ ನಲ್ಲಿ ಮಾಹಿತಿ ನೀಡಿ.

Koo App
ರಾಜ್ಯದಲ್ಲಿರುವ ಭ್ರಷ್ಟ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಲೇ ಬೇಕಿದೆ. ಅದಕ್ಕಾಗಿ ಜನಜಾಗೃತಿ ಮೂಡಿಸುತ್ತಿದ್ದು, ಬಿಜೆಪಿ ಸರ್ಕಾರದ ಭ್ರಷ್ಟಾಚಾರ ನಿಮ್ಮನ್ನೂ ಬಾಧಿಸಿದ್ದರೆ, ನಮ್ಮ ಸಹಾಯವಾಣಿ ಸಂಖ್ಯೆ 8447704040 ಗೆ ಕರೆ, ವಾಟ್ಸಪ್, 40percentsarkaara.com ವೆಬ್ ಸೈಟ್ ನಲ್ಲಿ ಮಾಹಿತಿ ನೀಡಿ. - @DKShivakumar #40percentsarkara
View attached media content
-ಕರ್ನಾಟಕ ಕಾಂಗ್ರೆಸ್ (@inckarnataka)14 Sep 2022

ರಾಜ್ಯವನ್ನು ಭ್ರಷ್ಟಾಚಾರ ಮುಕ್ತಗೊಳಿಸಬೇಕು ಎಂಬ ಉದ್ದೇಶದಿಂದ ಕಾಂಗ್ರೆಸ್ ಪಕ್ಷದಿಂದ ಜನಜಾಗೃತಿ ಅಭಿಯಾನ ಆರಂಭಿಸಲಾಗಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಸಂಪೂರ್ಣ ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಕಾಂಗ್ರೆಸ್​ ಹೇಳಿದೆ.

Koo App
ರಾಜ್ಯವನ್ನು ಭ್ರಷ್ಟಾಚಾರ ಮುಕ್ತಗೊಳಿಸಬೇಕು ಎಂಬ ಉದ್ದೇಶದಿಂದ ಕಾಂಗ್ರೆಸ್ ಪಕ್ಷದಿಂದ ಜನಜಾಗೃತಿ ಅಭಿಯಾನ ಆರಂಭಿಸಲಾಗಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಸಂಪೂರ್ಣ ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. - @siddaramaiah #40percentsarkara
View attached media content
-ಕರ್ನಾಟಕ ಕಾಂಗ್ರೆಸ್ (@inckarnataka)14 Sep 2022
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net