ಮನೆಯಲ್ಲಿ ಕಿತ್ತು ತಿನ್ನುವ ಬಡತನ, ಇತ್ತ ಉದ್ಯೋಗವೂ ಇಲ್ಲ: ಸಾವಿಗೆ ಶರಣಾದ ಅಣ್ಣ-ತಮ್ಮ

Brother
Published on

ಮೈಸೂರು: ಸಹೋದರರಿಬ್ಬರು ಸಾವಿನಲ್ಲೂ ಒಂದಾದ ಘಟನೆ ಎಚ್.ಡಿ.ಕೋಟೆ ತಾಲೂಕಿನ ಕಟ್ಟೆಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಆದರೆ, ಆ ಇಬ್ಬರ ಸಾವಿಗೆ ಕಾರಣವಾದ ವಿಚಾರದ ಬಗ್ಗೆ ತಿಳಿದರೆ ನಿಜಕ್ಕೂ ಮನಕದಡುವಂತಿದೆ.

ಅಣ್ಣ ಸಿದ್ದರಾಜು ಮನೆಯಲ್ಲಿ ನೇಣಿಗೆ ಶರಣಾದರೆ, ಅಣ್ಣನ ಸಾವಿನ ಸುದ್ದಿ ತಿಳಿದು ಕ್ರಿಮಿನಾಶಕ ಸೇವಿಸಿ ತಮ್ಮ‌ ನಾಗರಾಜು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಾಗರಾಜುನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದಾದರೂ ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದಾನೆ.

ಮನೆಯಲ್ಲಿ ಕಿತ್ತು ತಿನ್ನುವ ಬಡತನವಿತ್ತು. ಇತ್ತ ಉದ್ಯೋಗವೂ ಇರಲಿಲ್ಲ. ಇದರಿಂದ ಮನನೊಂದಿದ್ದ ಅಣ್ಣ ಸಿದ್ದರಾಜು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಣ್ಣನ ಮೇಲೆ ಅಪಾರವಾದ ಪ್ರೀತಿ ಹೊಂದಿದ್ದ ತಮ್ಮನು ಕೂಡ ಅಣ್ಣನ ಅಗಲಿಕೆಯನ್ನು ಸಹಿಸದೇ ಸಾವಿನ ಹಾದಿ ಹಿಡಿದಿದ್ದಾನೆ. ಇಬ್ಬರ ಸಾವಿನಿಂದ ಕಟ್ಟೆಮನುಗನಹಳ್ಳಿ ಗ್ರಾಮದಲ್ಲಿ ಸ್ಮಶಾನ ಮೌನ ಆವರಿಸಿದೆ.

ಈ ಘಟನೆ ನಾಲ್ಕು ದಿನಗಳ ಬಳಿಕ ತಡವಾಗಿ ಬೆಳಕಿಗೆ ಬಂದಿದೆ. ಎಚ್​.ಡಿ. ಕೋಟೆ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net