ಕೋವಿಡ್ ಲಸಿಕೆ ಪಡೆದಿದ್ದ ವಿದ್ಯಾರ್ಥಿನಿ ಅಸ್ವಸ್ಥ: ಗಾಬರಿಯಲ್ಲಿ 20ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲು

Students
Published on

ಚಾಮರಾಜನಗರ: ಕೋವಿಡ್ ಲಸಿಕೆ ಪಡೆದಿದ್ದ ಓರ್ವ ವಿದ್ಯಾರ್ಥಿನಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದನ್ನು ನೋಡಿ ಗಾಬರಿಗೊಂಡ ಉಳಿದ ವಿದ್ಯಾರ್ಥಿನಿಯರು ಸಹ ಆಸ್ಪತ್ರೆಗೆ ದೌಡಾಯಿಸಿರುವ ಪ್ರಸಂಗ ಚಾಮರಾಜನಗರದಲ್ಲಿ ವರದಿಯಾಗಿದೆ.

ಕರೊನಾ ಲಸಿಕೆ ಪಡೆಯದ ವಿದ್ಯಾರ್ಥಿನಿಯರು ಸಹಾ ಗಾಬರಿಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿದ್ಯಾರ್ಥಿನಿಯರಿಗೆ ಯಾವುದೇ ತೊಂದರೆ ಆಗಿಲ್ಲ. ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿಗೂ ಕೂಡ ಯಾವುದೇ ಸಮಸ್ಯೆಯಿಲ್ಲ. ಆದರೂ ಒಟ್ಟು 22 ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚಾಮರಾಜನಗರ ತಾಲೂಕಿನ ಜ್ಯೋತಿಗೌಡನಪುರದಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿನಿಯರಿಗೆ ಚಾಮರಾಜನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net