ಕೆಲಸ ಸಿಗದೇ ಜೀವನದಲ್ಲಿ ಜಿಗುಪ್ಸೆ ಹೊಂದಿ ಸಾವಿನ ಹಾದಿ ಹಿಡಿದ ಚಾಮರಾಜನಗರದ ಯುವಕ

CHN Youth
Published on

ಚಾಮರಾಜನಗರ: ಕೆಲಸ ಸಿಗದೇ ಜೀವನದಲ್ಲಿ ಜಿಗುಪ್ಸೆ ಹೊಂದಿ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ತಾಲೂಕಿನ ಜ್ಯೋತಿಗೌಡನಪುರ ಗ್ರಾಮದಲ್ಲಿ ನಡೆದಿದೆ.

ಮನು(22) ಆತ್ಮಹತ್ಯೆ ಮಾಡಿಕೊಂಡ ಯುವಕ. ಇತ್ತೀಚೆಗೆ ವಿದ್ಯಾಭ್ಯಾಸ ಮುಗಿಸಿದ್ದ ಯುವಕನಿಗೆ ಅಲೆದಾಡಿದರೂ ಯಾವುದೇ ನೌಕರಿ ಸಿಕ್ಕಿರಲಿಲ್ಲ. ಇದರಿಂದ ಆತ ಖಿನ್ನತೆಗೆ ಒಳಗಾಗಿದ್ದ.

ಮನೆಯಲ್ಲಿ ಯಾರೂ ಇಲ್ಲದ ವೇಳೆ ಕ್ರಿಮಿನಾಶಕ ಸೇವಿಸಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿಷ ಸೇವಿಸಿರುವ ಗೊತ್ತಾದ ಬೆನ್ನಲ್ಲೇ ಆತನನ್ನು ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಈ ಸಂಬಂಧ ಚಾಮರಾಜನಗರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net