ಹೃದಯಾಘಾತದಿಂದ ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ ವಿಧಿವಶ

GV Sriramareddy
Published on

ಚಿಕ್ಕಬಳ್ಳಾಪುರ: ಹೃದಯಾಘಾತದಿಂದ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ ಅವರು ಕೊನೆಯುಸಿರೆಳೆದಿದ್ದಾರೆ.

ಬೆಳಗ್ಗೆ 4 ಗಂಟೆಗೆ ಶ್ರೀರಾಮರೆಡ್ಡಿ ಅವರಿಗೆ ತೀವ್ರ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಬಾಗೇಪಲ್ಲಿ ಸಾರ್ವಜನಿಕ ಆಸ್ಪತ್ರೆಗೆ ಅವರನ್ನು ದಾಖಲಿಸಿ, ಪ್ರಥಮ ಚಿಕಿತ್ಸೆ ಕೊಡಿಸಲಾಯಿತು. ಆದರೆ, ಚಿಕಿತ್ಸೆ ಫಲಿಸದೇ ಬೆಳಗ್ಗೆ 7.28ಕ್ಕೆ ಮೃತಪಟ್ಟಿರುವುದಾಗಿ ತಾಲೂಕು ವೈದ್ಯಾಧಿಕಾರಿಗಳು ಘೋಷಿಸಿದರು.

ರಾಮರೆಡ್ಡಿ ಅವರು ಸಿಪಿಐಎಂ ಪಕ್ಷದಿಂದ ಶಾಸಕರಾಗಿದ್ದರು. ಸಿಪಿಐಎಂ ಪಕ್ಷದಿಂದ ಉಚ್ಚಾಟಿತರಾದ‌ ನಂತರ ಪ್ರಜಾ ಸಂಘರ್ಷ ಸಮಿತಿ ಪಕ್ಷ ಸ್ಥಾಪನೆ ಮಾಡಿದ್ದರು. ಶ್ರೀರಾಮರೆಡ್ಡಿ ಅವರ ನಿಧನಕ್ಕೆ ಅವರು ಬೆಂಬಲಿಗರ ಸಂತಾಪ ಸೂಚಿಸಿದ್ದಾರೆ. ಇಂದೇ ಅವರ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. (ದಿಗ್ವಿಜಯ ನ್ಯೂಸ್​)

Koo App
ಪ್ರಗತಿಪರ ಚಿಂತಕರು, ಕೃಷಿ-ಕಾರ್ಮಿಕರ ಪರ ಹೋರಾಟಗಾರರು ಹಾಗೂ ಮಾಜಿ ಶಾಸಕರಾದ ಕಾಮ್ರೇಡ್‌ ಜಿ.ವಿ.ಶ್ರೀರಾಮರೆಡ್ಡಿ ಅವರ ನಿಧನದ ಸುದ್ದಿ ನನಗೆ ತೀವ್ರ ದುಃಖ ಉಂಟು ಮಾಡಿದೆ. ಸಿಪಿಎಂ (ಐ) ಪಕ್ಷದಿಂದ ಎರಡು ಬಾರಿ ಬಾಗೇಪಲ್ಲಿ ಕ್ಷೇತ್ರದಿಂದ ಆಯ್ಕೆ ಆಗಿದ್ದ ಅವರು, ಮಾದರಿ ಜನಪ್ರತಿನಿಧಿಯಷ್ಟೇ ಅಲ್ಲ, ಅತ್ಯುತ್ತಮ ಸಂಸದೀಯ ಪಟುವೂ ಹೌದು.ಶ್ರೀರಾಮರೆಡ್ಡಿ ಅವರ ಅಗಲಿಕೆಯಿಂದ ರಾಜ್ಯದಲ್ಲಿ ನಡೆಯುತ್ತಿರುವ ವೈಚಾರಿಕಪರ ಹೋರಾಟದಲ್ಲಿ ದೊಡ್ಡ ಶೂನ್ಯವನ್ನೇ ಸೃಷ್ಟಿಸಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ.
View attached media content
-H D Kumaraswamy (@h_d_kumaraswamy)15 Apr 2022
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net