ನಿಂತಿದ್ದ ಕಾರಿಗೆ ಕ್ಯಾಂಟರ್​ ಡಿಕ್ಕಿ: ಇಬ್ಬರು ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ದುರಂತ ಸಾವು

Accident
Published on

ಚಿಕ್ಕಬಳ್ಳಾಪುರ: ಅಯ್ಯಪ್ಪ ಸ್ವಾಮಿ ಮಾಲಾಧರಿಗಳಿದ್ದ ಕಾರಿಗೆ ಕ್ಯಾಂಟರ್​ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವಿಗೀಡಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲ್ಲೂಕಿನ ಪೈಲಗೂರ್ಕಿ ಬಳಿ ನಡೆದಿದೆ.

ಮಂಜು ಇರುವ ಕಾರಣ ವೇಗವಾಗಿ ಬಂದ ಕ್ಯಾಂಟರ್ ಕಾರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಮೂವರಿಗೆ ಸಣ್ಣಪುಟ್ಟ ಗಾಯಳಾಗಿವೆ. ಮೃತರನ್ನು ಅನಂತಪುರ ಜಿಲ್ಲೆಯ ಗುಂತಕಲ್ಲು ಗ್ರಾಮದ ಧರಣೇಶ್ ಹಾಗೂ ನಿರಂಜನ್ ಸಿಂಗ್ ಎಂದು ಗುರುತಿಸಲಾಗಿದೆ. .

ರಸ್ತೆ ಬದಿಯಲ್ಲಿ ಕಾರು ನಿಲ್ಲಿಸಿ ಪಂಚರ್ ಹಾಕುತ್ತಿದ್ದಾಗ ವೇಗವಾಗಿ ಬಂದ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಗುಡಿಬಂಡೆ ಇನ್ಸ್‌ಪೆಕ್ಟರ್ ಲಿಂಗರಾಜು ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net