ಸ್ವಾತಂತ್ರ್ಯದ ಅಮೃತ ಮಹೋತ್ಸವ: ಮಾಣಿಕ್​ ಷಾ ಪರೇಡ್​ ಗ್ರೌಂಡ್​ನಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ ಬೊಮ್ಮಾಯಿ

CM Bommai
Published on

ಬೆಂಗಳೂರು: ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಣಿಕ್​ ಷಾ ಪರೇಡ್​ ಗ್ರೌಂಡ್​ನಲ್ಲಿ ಇಂದು ಬೆಳಗ್ಗೆ ಧ್ವಜಾರೋಹಣ ನೆರವೇರಿಸಿದರು.

ಧ್ವಜಾರೋಹಣದ ಬಳಿಕ ಸಿಎಂ ಬೊಮ್ಮಾಯಿ ಅವರು ತೆರದ ಜೀಪಿನಲ್ಲಿ ಪರೇಡ್ ಪರಿವೀಕ್ಷಣೆ ಮಾಡಿದರು. ಎನ್​ಸಿಸಿ, ಎನ್​ಎಸ್​ಎಸ್​, ಸ್ಕೌಟ್ಸ್ ಆ್ಯಂಡ್ ಗೈಡ್ಸ್​ ಅವರಿಂದ ಪಥಸಂಚಲನದ ಗೌರವ ಸ್ವೀಕರಿಸಿದರು.

ವಿಶೇಷ ಕಾರ್ಯಕ್ರಮ 75ನೇ ಸ್ವಾತಂತ್ರ್ಯ ಅಮೃತಮಹೋತ್ಸವ ಹಿನ್ನೆಲೆಯಲ್ಲಿ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಸರ್ಕಾರದಿಂದ ವಿಶೇಷ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ 11ಕ್ಕೆ ಕಾರ್ಯಕ್ರಮ ಆರಂಭವಾಗಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾಗಿಯಾಗಲಿದ್ದಾರೆ. ಸಂಗೀತ ನಿರ್ದೇಶಕರಾದ ಅರ್ಜುನ್ ಜನ್ಯ ಹಾಗೂ ವಿ. ನಾಗೇಂದ್ರ ಪ್ರಸಾದ್​ರಿಂದ ಸಂಗೀತ ಕಾರ್ಯಕ್ರಮ ಇರಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net