ಭಾರತ ಜೋಡೋ ಯಾತ್ರೆಯ ನಕ್ಷೆ ಬಿಡುಗಡೆಗೊಳಿಸಿದ ಕಾಂಗ್ರೆಸ್

Jodo Yatra
Published on

ಬೆಂಗಳೂರು: ಕಾಂಗ್ರೆಸ್ ಪಕ್ಷವು ಭಾರತ ಜೋಡೋ ಯಾತ್ರೆಯ ನಕ್ಷೆಯನ್ನು ಬಿಡುಗಡೆಗೊಳಿಸಿದ್ದು, 3500 ಕಿಲೋಮೀಟರ್‌ಗಳು ಪ್ರಯಾಣ ಬೆಳೆಸಲು ನಿರ್ಧರಿಸಿದೆ

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ ಜೋಡೋ ಯಾತ್ರೆಯಲ್ಲಿ ಕನ್ಯಾಕುಮಾರಿ, ತಿರುವನಂತಪುರ, ಕೊಚ್ಚಿ, ಮೈಸೂರು, ಬಳ್ಳಾರಿ,ರಾಯಚೂರಿನಿಂದ ಪ್ರಾರಂಭಿಸಿ ಶ್ರೀನಗರಕ್ಕೆ ತಲುಪುವ ಮೂಲಕ ಯೋಜನೆ ಹಾಕಿಕೊಂಡಿದೆ.

Koo App
3500 ಕಿಲೋಮೀಟರ್‌ಗಳು, ಲಕ್ಷಾಂತರ ಜನ ಒಂದೇ ಗುರಿಯೊಂದಿಗೆ ಭಾರತವನ್ನು ಒಂದುಗೂಡಿಸಲು ಜೊತೆಯಾಗಿ ಹೆಜ್ಜೆ ಹಾಕಲಿದ್ದಾರೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ’ಭಾರತ್ ಜೋಡೋ ಯಾತ್ರೆ’ಯ ಮಾರ್ಗ ನಕ್ಷೆ. #BharatJodoYatra
View attached media content
-ಕರ್ನಾಟಕ ಕಾಂಗ್ರೆಸ್ (@inckarnataka)26 Aug 2022

ಈ ಯಾತ್ರೆಯನ್ನು ಆರ್ಥಿಕ ಅಸಮಾನತೆಯನ್ನು ಹೋಗಲಾಡಿಸಲು, ಸಾಮಾಜಿಕ ಧ್ರುವೀಕರಣದಿಂದ ಮುಕ್ತಿ ಪಡೆಯಲು ರಾಜಕೀಯ ಉದ್ವಿಗ್ನತೆಯನ್ನು ಹೋಗಲಾಡಿಸಿ, ಆರೋಗ್ಯಕರ ರಾಜಕಾರಣದ ಆರಂಭಕ್ಕಾಗಿ ಕೈಗೊಳ್ಳುತ್ತಿರುವುದಾಗಿ ಕಾಂಗ್ರೆಸ್ ಹೇಳಿದ್ದು, ಎಲ್ಲರೂ ಒಂದಾಗಿ ಭಾರತವನ್ನು ಒಗ್ಗೂಡಿಸೋಣ ಎಂದು ಕರೆ ನೀಡಿದೆ.

Koo App
▶️ ಆರ್ಥಿಕ ಅಸಮಾನತೆಯನ್ನು ಹೋಗಲಾಡಿಸಲು ▶️ ಸಾಮಾಜಿಕ ಧ್ರುವೀಕರಣದಿಂದ ಮುಕ್ತಿ ಪಡೆಯಲು ▶️ ರಾಜಕೀಯ ಉದ್ವಿಗ್ನತೆಯನ್ನು ಹೋಗಲಾಡಿಸಿ, ಆರೋಗ್ಯಕರ ರಾಜಕಾರಣದ ಆರಂಭಕ್ಕಾಗಿ ಭಾರತ ಜೋಡೋ ಯಾತ್ರೆ ಅನಿವಾರ್ಯವಾಗಿದೆ. ಬನ್ನಿ, ಎಲ್ಲರೂ ಒಂದಾಗಿ ಭಾರತವನ್ನು ಒಗ್ಗೂಡಿಸೋಣ. #BharatJodoYatra
View attached media content
-ಕರ್ನಾಟಕ ಕಾಂಗ್ರೆಸ್ (@inckarnataka)26 Aug 2022

ದೇಶದಲ್ಲಿ 20 ರಿಂದ 24 ವರ್ಷದ 42% ಯುವ ಜನತೆ ನಿರುದ್ಯೋಗಿಗಳಾಗಿದ್ದಾರೆ. ಬನ್ನಿ, ನಿರುದ್ಯೋಗದ ಜಾಲವನ್ನು ಮುರಿಯೋಣ, ಭಾರತವನ್ನು ಒಗ್ಗೂಡಿಸೋಣ ಎಂದು ಹೇಳಿದ್ದಾರೆ.

Koo App
ದೇಶದಲ್ಲಿ 20 ರಿಂದ 24 ವರ್ಷದ 42% ಯುವ ಜನತೆ ನಿರುದ್ಯೋಗಿಗಳಾಗಿದ್ದಾರೆ. ಬನ್ನಿ, ನಿರುದ್ಯೋಗದ ಜಾಲವನ್ನು ಮುರಿಯೋಣ, ಭಾರತವನ್ನು ಒಗ್ಗೂಡಿಸೋಣ. #BharatJodoYatra
View attached media content
-ಕರ್ನಾಟಕ ಕಾಂಗ್ರೆಸ್ (@inckarnataka)26 Aug 2022

ಇನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕೂಡ ಹೆಜ್ಜೆಗಳನ್ನು ಜೋಡಿಸಿ, ದೇಶವನ್ನು ಒಂದಾಗಿಸಿ ಎಂದು ಆಹ್ವಾನ ನೀಡಿದ್ದಾರೆ.

Koo App
ಹೆಜ್ಜೆಗಳನ್ನು ಜೋಡಿಸಿ ದೇಶವನ್ನು ಒಂದಾಗಿಸಿ #BharatJodoYatra
View attached media content
-D K Shivakumar (@dkshivakumar_official)26 Aug 2022
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net