ಚಾಕೋಲೆಟ್ ತರಲು ಅಂಗಡಿಗೆ ತರಳಿದ ಬಾಲಕಿ ಮನೆಗೆ ಮರಳಿದ್ದು ಹೆಣವಾಗಿ: ಈ ಸಾವು ನ್ಯಾಯವೇ?

Girl
Published on

ದಾವಣಗೆರೆ: ಇದ್ದಕ್ಕಿದ್ದಂತೆ ಕುಸಿದು ಬಿದ್ದ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆ ಜಗಳೂರು ತಾಲೂಕಿನ ಗೊಲ್ಲರಹಟ್ಟಿ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಶಶಿಧರ-ಶ್ರುತಿ ದಂಪತಿ ಪುತ್ರಿ ನಿಹಾರಿಕ (8) ಮೃತ ಬಾಲಕಿ. ನಿನ್ನೆ ಅಂಗಡಿಗೆ ಚಾಕಲೇಟ್ ತರಲು ತೆರಳುತ್ತಿದ್ದಳು. ಈ ವೇಳೆ ಏಕಾಏಕಿ ರಸ್ತೆಯಲ್ಲಿ ಕುಸಿದು ಬಿದ್ದು ನಿಹಾರಿಕ ಕೊನೆಯುಸಿರೆಳೆದಿದ್ದಾಳೆ. ಬಾಲಕಿಗೆ ಯಾವುದೇ ಆರೋಗ್ಯ ಸಮಸ್ಯೆ ಇರಲಿಲ್ಲ ಎಂದುತ ತಿಳಿದುಬಂದಿದೆ.

ಕುಸಿದು ಬಿದ್ದ ಬಾಲಕಿಯನ್ನು ತಕ್ಷಣ ಜಗಳೂರಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಯಿತು. ಆದರೆ, ಅಷ್ಟರಲ್ಲಾಗಲೇ ಬಾಲಕಿ ಮೃತಪಟ್ಟಿರುವುದನ್ನು ವೈದ್ಯರು ದೃಢೀಕರಿದರು.

ಮಗಳನ್ನು ಕಳೆದುಕೊಂಡ ಪಾಲಕರ ಆಕ್ರಂದನ ಮುಗಿಲು ಮುಟ್ಟಿದೆ. ಮರಣೋತ್ತರ ಪರೀಕ್ಷೆ ನಡೆದಿದ್ದು, ಶೀಘ್ರವೆ ಸಾವಿಗೆ ಕಾರಣ ತಿಳಿಯಲಿದೆ. ಈ ಸಂಬಂಧ ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net