ಜ್ವರದಿಂದ ಬಳಲುತ್ತಿದ್ದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು: ಮುಗಿಲು ಮುಟ್ಟಿದ ಪಾಲಕರ ಆಕ್ರಂದನ

SSLC Student
Published on

ದಾವಣಗೆರೆ: ಜ್ವರದಿಂದ ಬಳಲುತ್ತಿದ್ದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ನ್ಯಾಮತಿ ತಾಲ್ಲೂಕಿನ ಚಟ್ನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಎ.ಎಂ. ಹರ್ಷಿತಾ (15) ಮೃತಪಟ್ಟ ವಿದ್ಯಾರ್ಥಿನಿ. ಈಕೆ ಚಟ್ನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ. ಎರಡು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದಳು. ವಾಂತಿ-ಭೇದಿಯಿಂದ ನರಳಿದ್ದಳು.

ಜ್ವರ ಹೆಚ್ಚಾದ ಹಿನ್ನೆಲೆಯಲ್ಲಿ ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾಳೆ. ಮೃತ ವಿದ್ಯಾರ್ಥಿನಿಗೆ ಕೋವಿಡ್ ಸೊಂಕು ದೃಢಪಟ್ಟಿಲ್ಲ.

ಬೆಳೆದ ಮಗಳನ್ನು ಕಳೆದುಕೊಂಡ ಕುಟುಂಬದಲ್ಲೀಗ ಆಕ್ರಂದನ ಮುಗಿಲು ಮುಟ್ಟಿದೆ. ಮೃತಳ ಅಂತ್ಯಕ್ರಿಯೆ ಸ್ವಗ್ರಾಮದ ರುದ್ರಭೂಮಿಯಲ್ಲಿ ಇಂದು ನಡೆಯಲಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net