ಜು.31 ರಂದು ಸೇವಾ ಕಾರ್ಯ

c3e9bc7e-e8f9-4856-af45-bae96f975875
Published on

ಚಾಮರಾಜನಗರ: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧೃವನಾರಾಯಣ್ ಅವರ 61ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ  ಜು. 31 ರಂದು ಅವರ ಅಭಿಮಾನಿ ಬಳಗದ ವತಿಯಿಂದ  ನಗರದಲ್ಲಿ  ಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ ತಿಳಿಸಿದರು.

ನಗರದ ಜಿಲ್ಲಾ ಕಾರ್ಯನಿರತ  ಪತ್ರಕರ್ತರ ಭವನದ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಢಿಯಲ್ಲಿ ಅವರು ಮಾತನಾಡಿದರು.  ಧ್ರುವನಾರಾಯಣ್ ಅಭಿಮಾನಿ ಬಳಗದ ವತಿಯಿಂದ ಬೃಹತ್ ಉಚಿತ ಕಣ್ಣಿನ ತಪಾಸಣಾ ಶಿಬಿರ ಹಾಗೂ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ನಗರದ ರೈಲ್ವೆ ನಿಲ್ದಾಣದ ಹತ್ತಿರದಲ್ಲಿರುವ ಮಾಂಗಲ್ಯಂ ಕನ್ವೆನ್ಷನ್ ಹಾಲ್  ಬೆಳಗ್ಗೆ 8 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ. ವೇದಿಕೆ ಕಾರ್ಯಕ್ರಮವನ್ನು ಸರ್ವಧರ್ಮಗುರುಗಳು ಉದ್ಘಾಟಿಸಲಿದ್ದಾರೆ ಎಂದರು.

ಆರ್.ಧ್ರುವನಾರಾಯಣ್ ಅಭಿಮಾನಿ ಬಳಗದ ಅಧ್ಯಕ್ಷ ಕಾಗಲವಾಡಿ, ಪ್ರಧಾನ ಕಾರ್ಯದರ್ಶಿ ಎಲ್ಐಸಿ ನಾಗನಾಯಕ , ಕೆಪಿಸಿಸಿ ಸದಸ್ಯ ಸೈಯದ್ ರಫೀ, ಜಿ.ಪಂ.ಮಾಜಿ ಸದಸ್ಯ ಕೆ.ಪಿ.ಸದಾಶಿವಮೂರ್ತಿ, ಕೆಪಿಸಿಸಿ   ಹಿಂದುಳಿದ  ವರ್ಗಗಳ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ  ಸಿ.ಎ.ಮಹದೇವಶೆಟ್ಡಿ, ಚೂಡಾ ಮಾಜಿ ಸದಸ್ಯ  ಶ್ರೀಕಾಂತ್ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net