ಬೈಕ್‌ನಲ್ಲಿ ಮೊಬೈಲ್ ಹಾಗೂ ಹಗ್ಗವನ್ನಿಟ್ಟು ಕೃಷ್ಣಾ ನದಿಗೆ ಹಾರಿ ಅರಣ್ಯ ಇಲಾಖೆ ಸಿಬ್ಬಂದಿ ಆತ್ಮಹತ್ಯೆ

Forest Watcher
Published on

ವಿಜಯಪುರ: ಕೃಷ್ಣಾ ನದಿಗೆ ಜಿಗಿದ್ದು ಅರಣ್ಯ ಇಲಾಖೆ ಸಿಬ್ಬಂದಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ಕೃಷ್ಣಾ ನದಿಯಲ್ಲಿ ಘಟನೆ ನಡೆದಿದೆ.

ಕೊಲ್ಹಾರ ಸೇತುವೆಯ ಮೇಲಿಂದ ಹಾರಿ ಕೊಲ್ಹಾರ ವಲಯ ಅರಣ್ಯ ಇಲಾಖೆಯ ಅರಣ್ಯ ರಕ್ಷಕ ಈರಪ್ಪ ದುಂಡಪ್ಪ ದಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸುಮಾರು 8 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದ ನಿವಾಸಿ ಈರಪ್ಪ ದುಂಡಪ್ಪ ದಟ್ಟಿ ನಿನ್ನೆ ಮಧ್ಯಾಹ್ನ ಕೃಷ್ಣಾ ನದಿಗೆ ಹಾರಿದ್ದಾರೆ ಎನ್ನಲಾಗಿದೆ.

ಸೇತುವೆ ಮೇಲೆ ತನ್ನ ಬೈಕ್ ನಿಲ್ಲಿಸಿದ್ದಾನೆ. ಬೈಕ್‌ನಲ್ಲಿ ಮೊಬೈಲ್ ಹಾಗೂ ಹಗ್ಗವನ್ನಿಟ್ಟು ತನ್ನ ಅರಣ್ಯ ಇಲಾಖೆಯ ಸಮವಸ್ತ್ರ ಸಹಿತ ಸೇತುವೆ ಮೇಲಿಂದ ನದಿಗೆ ಹಾರಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ಕೊಲ್ಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಹಾಗೂ ಸ್ಥಳೀಯರು ಹುಡುಕಾಟ ನಡೆಸಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net