ಗ್ರಾಮ ಪಂಚಾಯಿತಿ ಅಧ್ಯಕ್ಷರ ಅಧಿಕಾರ ಮೊಟುಕುಗೊಳಿಸುವ ಪ್ರಶ್ನೆಯೇ ಇಲ್ಲ: ಸಚಿವ ಕೋಟ ಶ್ರೀನಿವಾಸ ಪೂಜಾರಿ

kota
Published on

ಬೆಂಗಳೂರು: ಗ್ರಾಮ ಪಂಚಾಯಿತಿ ಅಧ್ಯಕ್ಷರ ಅಧಿಕಾರ ಮೊಟುಕುಗೊಳಿಸಿ ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡುವ ಪ್ರಶ್ನೆಯೇ ಇಲ್ಲ. ಸರ್ಕಾರದ ಅಂತಹ‌ ಪ್ರಸ್ತಾವನೆಯೂ ಇಲ್ಲವೆಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಳ್ಳಿಹಾಕಿದರು.

ಅರಮನೆ ಮೈದಾನದಲ್ಲಿ ಶುಕ್ರವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಶ್ರೀನಿವಾಸ ಪೂಜಾರಿ ಅವರು ಸಾಮಾಜಿಕ ಜಾಲತಾಣದಲ್ಲಿ ಕಳೆದ ಕೆಲವು ದಿನಗಳಿಂದ ಈ ವಿಷಯ ಚರ್ಚೆಯಾಗುತ್ತಿದೆ. ಮುಖ್ಯಮಂತ್ರಿ ಜತೆಗೂ ಮಾತನಾಡಿದ್ದೇನೆ. ಗ್ರಾ.ಪಂ. ಅಧ್ಯಕ್ಷರಿಗೆ ಹೆಚ್ಚಿನ ಅಧಿಕಾರ ನೀಡುವ ಚಿಂತನೆ ನಡೆದಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಹತ್ವದ ಯೋಜನೆಗಳ ಅನುಷ್ಠಾನ, ಗ್ರಾಮಾಭಿವೃದ್ಧಿ ಜವಾಬ್ದಾರಿ ಹೊತ್ತಿರುವ ಗ್ರಾ.ಪ.ಗಳ ಬಲವರ್ಧನೆಗೆ ಸಿಎಂ ಬೊಮ್ಮಾಯಿ‌ ಒಲವು ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net