

ಬೆಂಗಳೂರು: ಹಿಜಾಬ್ ಕುರಿತು ಹೈಕೋರ್ಟ್ ಮಧ್ಯಂತರ ತೀರ್ಪು ನೀಡಿದರೂ ಕಾಲೇಜುಗಳಲಿದ್ದ ಹಿಜಾಬ್ ಗಲಾಟೆ ಇದೀಗ ಶಾಲೆಗೂ ವ್ಯಾಪಿಸಿದೆ.
ಚಂದ್ರಲೇಔಟ್ನಲ್ಲಿರುವ ವಿದ್ಯಾಸಾಗರ್ ಶಾಲೆಯಲ್ಲಿ ಬೆಳಗ್ಗೆ ಹಿಜಾಬ್ ಗಲಾಟೆ ನಡೆಡಿದ್ದು, ಈ ವಿಚಾರವಾಗಿ ಪಾಲಕರು ಮತ್ತು ಶಾಲಾ ಆಡಳಿತ ಮಂಡಳಿ ವಿರುದ್ಧ ಮಾತಿನ ಚಕಮಕಿ ನಡೆದಿದೆ. ಪೊಲೀಸರು ಶಾಲೆಗೆ ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಿಸಲು ಮುಂದಾದರು.
ಶಾಲಾ ಶಿಕ್ಷಕಿ ಒಬ್ಬರು ತರಗತಿ ಬೋರ್ಡ್ ಮೇಲೆ KLS ಎಂದು ಬರೆದು ನೀವೇ ಅರ್ಥ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ ಮತ್ತು 7ನೇ ತರಗತಿ ವಿದ್ಯಾರ್ಥಿಗೆ ಹಿಜಾಬ್ ತೆಗೆಯುವಂತೆ ಶಾಲೆಯಲ್ಲಿ ಶಿಕ್ಷಕಿ ಸೂಚನೆ ನೀಡಿದ್ದಾರೆ. ಈ ವಿಚಾರವಾಗಿ ಗಲಾಟೆ ನಡೆದಿದೆ ಎನ್ನಲಾಗಿದೆ. ಆ ಶಾಲಾ ಶಿಕ್ಷಕಿಯನ್ನು ಶಾಲಾ ಆಡಳಿತ ಮಂಡಳಿ ಸಸ್ಪೆಂಡ್ ಮಾಡಿದೆ.
ಪರಿಸ್ಥಿತಿ ಮಿತಿ ಮಿರುತ್ತಿದ್ದನಂತೆ ಬೆಂಗಳೂರು ದಕ್ಷಿಣ ಜಿಲ್ಲಾ ಉಪನಿರ್ದೇಶಕ ರಾಜೇಂದ್ರ ಶಾಲೆಗೆ ಭೇಟಿ ನೀಡಿ ಪಾಲಕರು ಮತ್ತು ಆಡಳಿತ ಮಂಡಳಿಯಿಂದ ಮಾಹಿತಿ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.