ಹಿಜಾಬ್​ ವಿವಾದ: ಹೈಕೋರ್ಟ್​ ನೀಡಿದ ಐತಿಹಾಸಿಕ ತೀರ್ಪಿನ ಬಗ್ಗೆ ಸಚಿವ ಕೆ.ಎಸ್​. ಈಶ್ವರಪ್ಪ ಹೇಳಿದ್ದು ಹೀಗೆ...

KS ESHWARAPPA
Published on

ಶಿವಮೊಗ್ಗ: ಹಿಜಾಬ್ ವಿವಾದದ ಬಗ್ಗೆ ಹೈಕೋರ್ಟ್ ಕೊಟ್ಟಿರುವ ತೀರ್ಪನ್ನು ಸಂತೋಷದಿಂದ ಸ್ವಾಗತಿಸುತ್ತೇನೆ. ಪ್ರಚೋದನೆ ನೀಡಿದವರು ಗಮನಿಸಿ ತಕ್ಷಣವೇ ಎಲ್ಲ ವಿದ್ಯಾರ್ಥಿನಿಯರನ್ನು ಶಾಲೆಗೆ ಕಳುಹಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಕೆ.ಎಸ್​. ಈಶ್ವರಪ್ಪ ಅವರು ಹೇಳಿದರು.

ಶಿವಮೊಗ್ಗದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಇನ್ನಾದರೂ ಗೊಂದಲಗಳನ್ನು ಬಿಟ್ಟು ಶಾಲಾ-ಕಾಲೇಜಿಗೆ ಬರುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಎಲ್ಲರು ಕೋರ್ಟ್ ತೀರ್ಪಿಗೆ ತಲೆಬಾಗಲೇಬೇಕಿದೆ. ಕೋರ್ಟ್ ಸರ್ಕಾರದ ತೀರ್ಮಾನವನ್ನು ಎತ್ತಿ ಹಿಡಿದಿರುವುದು ಸಂತೋಷ ತಂದಿದೆ. ಅನ್ಯಾಯವಾಗಿ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಿದೆ. ಪ್ರಾಯೋಗಿಕ ಪರೀಕ್ಷೆಯನ್ನು ಕೆಲ ಮಕ್ಕಳು ತಪ್ಪಿಸಿಕೊಂಡಿದ್ದಾರೆ. ಕೋರ್ಟ್​ನ ಮಧ್ಯಂತರ ತೀರ್ಪಿನ ಅನ್ವಯ ನಡೆದುಕೊಂಡಿದ್ದರೆ ಮಕ್ಕಳಿಗೆ ಅನ್ಯಾಯವಾಗುತ್ತಿರಲಿಲ್ಲ‌ ಎಂದು ಹೇಳಿದರು.

ಸರ್ಕಾರ ಮುಸ್ಲಿಂ ಸಮುದಾಯದ ಮಕ್ಕಳಿಗೆ ಅನ್ಯಾಯವಾಗದ ರೀತಿ ಕ್ರಮ ಕೈಗೊಳ್ಳಲಿದೆ ಎಂದು ಇದೇ ಸಂದರ್ಭದಲ್ಲಿ ಈಶ್ವರಪ್ಪ ಅವರು ಭರವಸೆಯನ್ನು ನೀಡಿದರು.

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್​ ನಿರ್ಬಂಧ ಪ್ರಕರಣ ಸಂಬಂಧ ಇಂದು ಹೈಕೋರ್ಟ್​ ಮಹತ್ವದ ತೀರ್ಪು ನೀಡಿದೆ. ಹಿಜಾಬ್ ಧರಿಸುವುದು ಇಸ್ಲಾಂ ಅಗತ್ಯ ಧಾರ್ಮಿಕ ಆಚರಣೆಯಲ್ಲ ಎಂದಿರುವ ಹೈಕೋರ್ಟ್​, ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಎಲ್ಲ ಅರ್ಜಿಗಳನ್ನೂ ವಜಾ ಮಾಡಿದೆ. ಶಾಲಾ-ಕಾಲೇಜುಗಲ್ಲಿ ವಿದ್ಯಾರ್ಥಿಗಳು ಸಮವಸ್ತ್ರ ಧರಿಸಬೇಕು. ಸರ್ಕಾರದ ವಸ್ತ್ರ ಸಂಹಿತೆ ನೀತಿಯನ್ನು ಪ್ರಶ್ನಿಸುವಂತಿಲ್ಲ ಎಂದು ಹೈಕೋರ್ಟ್ ಪೂರ್ಣ ಪೀಠ ಮಹತ್ವದ ತೀರ್ಪು ಪ್ರಕಟಿಸಿದೆ.

ಶಾಲಾ-ಕಾಲೇಜುಗಳ ವಸ್ತ್ರ ಸಂಹಿತೆಯನ್ನು ವಿದ್ಯಾರ್ಥಿಗಳು ಪ್ರಶ್ನಿಸುವಂತಿಲ್ಲ. ಸರ್ಕಾರದ ಸಮವಸ್ತ್ರ ಸಂಹಿತೆ ಕಾನೂನು ಬದ್ಧವಾಗಿದೆ ಎಂದು ಹೈಕೋರ್ಟ್​ ಹೇಳಿದೆ. ನ್ಯಾಯಪೀಠವು 8 ನಿಮಿಷದಲ್ಲಿ ತೀರ್ಪು ಓದಿ‌ ಮುಗಿಸಿತು.

Koo App
ಹಿಜಾಬ್ ವಿಚಾರದಲ್ಲಿ ಕಾಂಗ್ರೆಸ್, ಎಸ್‌ಡಿಪಿಐ, ಸಿಎಫ್‌ಐ ಮೂಗು ತೂರಿಸಿದ್ದರಿಂದ ಸಮಾಜದಲ್ಲಿ ಅಶಾಂತಿ ಸೃಷ್ಟಿಯಾಯ್ತು. ಕಾಂಗ್ರೆಸ್ ಪಕ್ಷದ ಇಬ್ಬಗೆ ನೀತಿ, ಮತ ರಾಜಕಾರಣಕ್ಕಾಗಿ ಒಡೆದಾಳು ನೀತಿಯ ಪರಿಣಾಮವಾಗಿ ಸಾವಿರಾರು ವಿದ್ಯಾರ್ಥಿನಿಯರು ಪರೀಕ್ಷೆಯಿಂದ ಹಿಂದೆ ಸರಿದರು. ಇದಕ್ಕೆಲ್ಲಾ ಕಾಂಗ್ರೆಸ್ ನೇರ ಹೊಣೆ. #YesToUniform_NoToHijab-BJP KARNATAKA (@BJP4Karnataka)15 Mar 2022
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net