ಪತ್ನಿಯ ಅನೈತಿಕ ಸಂಬಂಧ: ಮಾನಕ್ಕೆ ಹೆದರಿ ಡೆತ್​ನೋಟ್​ ಬರೆದಿಟ್ಟು ಪತಿ ಆತ್ಮಹತ್ಯೆಗೆ ಶರಣು

hang
Published on

ಹುಬ್ಬಳ್ಳಿ: ಪತ್ನಿಯ ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಮಾನಕ್ಕೆ ಹೆದರಿದ ಪತಿಯೊಬ್ಬ ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ ಗ್ರಾಮದಲ್ಲಿ ನಡೆದಿದೆ.

ಬೂದಪ್ಪ ಕೋರಿ (42) ಮೃತ ವ್ಯಕ್ತಿ. ಮನೆಯಲ್ಲಿಯೇ ನೇಣು ಹಾಕಿಕೊಂಡು ಬೂದಪ್ಪ ಕೋರಿ ಸಾವಿಗೆ ಶರಣಾಗಿದ್ದಾನೆ. ಆತ್ಮಹತ್ಯೆಗೂ ಮುನ್ನ ಡೆತ್​ನೋಟ್ ಬರೆದಿಟ್ಟಿರುವ ಕೋರಿ, ನನ್ನ ಸಾವಿಗೆ ಪತ್ನಿ, ಪತ್ನಿಯ ಪ್ರೀಯಕರ ಕಾರಣ ಆರೋಪಿಸಿದ್ದಾನೆ.

ಬೂದಪ್ಪನ ಪತ್ನಿಯ ಹೆಸರು ಪಾರ್ವತಿ. ದಂಪತಿಗೆ ಇಬ್ಬರು ಮಕ್ಕಳು ಸಹ ಇದ್ದಾರೆ. ಪಾರ್ವತಿ ಕಳೆದ ಐದು ವರ್ಷದಿಂದ ಹುಬ್ಬಳ್ಳಿಯ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಅಕ್ರಮ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಎರಡು ವರ್ಷಗಳ ಹಿಂದೆ ಬೂದಪ್ಪ ಹೆಂಡತಿಯ ಕೆಲಸ ಬಿಡಿಸಿದ್ದ. ಇದಾದ ಬಳಿಕ ಇಬ್ಬರ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಇದರಿಂದ ಆಕೆ ತವರು ಮನೆಗೆ ಹೋಗಿದ್ದಳು.

ಈ ಮಧ್ಯೆ ಪತ್ನಿ ಪಾರ್ವವತಿ ಕುಟುಂಬವರು ಸಹ ಬೂದಪ್ಪನಿಗೆ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಇದರಿಂದ ಮನನೊಂದು ಬೂದಪ್ಪ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬೂದಪ್ಪ ಕುಟುಂಬಸ್ಥರು ಆರೋಪಿಸಿ ದೂರು ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಹುಬ್ಬಳ್ಳಿಯ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net