ಸಚಿವರಾಗುವ ವಿಶ್ವಾಸದಲ್ಲಿ ಆರ್. ಶಂಕರ

11-RNR-01 r.shankar
Published on

ರಾಣೆಬೆನ್ನೂರ: ‘ಜ. 13ರಂದು ಮಂತ್ರಿ ಸ್ಥಾನ ನೀಡುವುದಾಗಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಆದರೆ, ಸಚಿವ ಸಂಪುಟ ವಿಸ್ತರಣೆಯೋ? ಪುನಾರಚನೆಯೋ? ಗೊತ್ತಿಲ್ಲ. ಒಟ್ಟಿನಲ್ಲಿ ನನಗೆ ಸಚಿವ ಸ್ಥಾನ ಸಿಗುವ ಭರವಸೆ ಇದೆ’ ಎಂದು ವಿಧಾನ ಪರಿಷತ್ ಸದಸ್ಯ ಆರ್. ಶಂಕರ ಹೇಳಿದರು.

ನಗರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಈ ಹಿಂದೆ ಸಚಿವನಾಗಿದ್ದೆ. ಆದರೆ, ಸುಭದ್ರ ಸರ್ಕಾರಕ್ಕಾಗಿ ರಾಜೀನಾಮೆ ನೀಡಿದ್ದೇನೆ. ಕೇಂದ್ರ ಹಾಗೂ ರಾಜ್ಯದಲ್ಲಿ ಒಂದೇ ಸರ್ಕಾರ ಇದ್ದರೆ ಅಭಿವೃದ್ಧಿ ಕಾರ್ಯಗಳಿಗೂ ಅನುಕೂಲ ಆಗುತ್ತದೆ ಎಂಬ ಉದ್ದೇಶದಿಂದ ರಾಜೀನಾಮೆ ನೀಡಿದ್ದೇನೆ. ಈಗ ಯಡಿಯೂರಪ್ಪ ಅವರು ಒಳ್ಳೆಯ ಖಾತೆ ಕೊಟ್ಟರೆ ಅಭಿವೃದ್ಧಿ ಕಾರ್ಯ ಮಾಡಲು ಅನುಕೂಲವಾಗುತ್ತದೆ. ಸಿಎಂ ದೆಹಲಿ ಭೇಟಿಯ ಬೆಳವಣಿಗೆಗಳು ಮಾಧ್ಯಮಗಳ ಮೂಲಕ ತಿಳಿದಿದೆ. ಆದರೆ, ಸಿಎಂ ಬದಲಾವಣೆ ಬಗ್ಗೆ ನನಗೆ ಮಾಹಿತಿಯಿಲ್ಲ. ಯಡಿಯೂರಪ್ಪನವರೇ ಮುಂದಿನ ಸಿಎಂ ಆಗಿರುತ್ತಾರೆ ಎಂಬ ವಿಶ್ವಾಸವಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net