

ಬೆಳಗಾವಿ: ಪಂಚಮಸಾಲಿ ಸಮುದಾಯದ ಹಿರಿಯ ಮುಖಂಡ, ಬೆಳಗಾವಿ ಜಿಲ್ಲಾ ಅಧ್ಯಕ್ಷ ಆರ್.ಕೆ. ಪಾಟೀಲ (58) ಗುರುವಾರ ನಿಧನರಾದರು. ಮೃತರಿಗೆ ಪುತ್ನಿ, ಪುತ್ರ, ಪುತ್ರಿ ಇದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಆರ್.ಕೆ. ಪಾಟೀಲ ಅವರು, ಕಳೆದ ಕೆಲ ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರ್.ಕೆ. ಪಾಟೀಲ ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ವಕೀಲರಾದ ಎಂ.ಬಿ. ಝಿರಲಿ, ಹನುಮಂತ ಕೊಂಗಾಲಿ, ಬೆಳಗಾವಿ ವಕೀಲರ ಸಂಘದ ಮಾಜಿ ಅಧ್ಯಕ್ಷ ಪ್ರಭು ಯತ್ನಟ್ಟಿ ಅವರು ಸಂತಾಪ ಸೂಚಿಸಿದ್ದಾರೆ.