ಯಾರೋ ಹೇಳಿದ್ದೆಲ್ಲ ಸತ್ಯವಲ್ಲ: ಈಶ್ವರಪ್ಪ ಪರ ಸಚಿವ ಬಿ.ಸಿ.ಪಾಟೀಲ್ ವಕಾಲತ್ತು

BC Patil
Published on

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ತನಿಖೆ ನಡೆಯುತ್ತಿದೆ. ಇದಾದ ನಂತರ ಸತ್ಯ ಹೊರಬರಲಿದೆ. ಯಾರೋ ಹೇಳಿದ್ದೆಲ್ಲ ಸತ್ಯವಲ್ಲ ಎಂದು ಸಚಿವ ಈಶ್ವರಪ್ಪ ಪರವಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ವಕಾಲತ್ತು ವಹಿಸಿದರು.

ರಾಜ್ಯ ಬಿಜೆಪಿ ಕಚೇರಿಯಲ್ಲಿ ಬುಧವಾರ ಕರೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲು ತನಿಖೆಯಾಗಬೇಕು. ನಂತರ ಈ ಪ್ರಕರಣದಲ್ಲಿ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕ್ರಮವಾಗಲಿದೆ ಎಂದರು.

ಮಾಧ್ಯಮಗಳಲ್ಲಿ ಈಶ್ವರಪ್ಪ ಹೇಳಿಕೆ ಗಮನಿಸಿದ್ದೇನೆಯೇ ಹೊರತು ಹೆಚ್ಚಿನ ಮಾಹಿತಿಯಿಲ್ಲ. ಸಂತೋಷ್ ನಮ್ಮ ಇಲಾಖೆಯಲ್ಲಿ ಗುತ್ತಿಗೆ ಪಡೆದಿಲ್ಲ ಎಂದು ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.

ನೊಂದ ಕುಟುಂಬದ ಜತೆ ನಾವಿದ್ದೇವೆ ಅವರ ಕಷ್ಟದಲ್ಲಿ ಭಾಗಿಯಾಗುತ್ತೇವೆ ಅದು ಬೇರೆ ವಿಷಯ ಆದರೆ ಆತ್ಮಹತ್ಯೆ ಯಾಕೆ ಆಗಿದೆ ಎಂದು ತನಿಖೆ ನಡೆಯುತ್ತಿದೆ, ತನಿಖೆ ಆದ ನಂತರ ಗೃಹ ಇಲಾಖೆ, ಮುಖ್ಯಮಂತ್ರಿಗಳು ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ ಎಂದು ಬಿ.ಸಿ.ಪಾಟೀಲ್ ಪುನರುಚ್ಚರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net