

ಕಲಬುರಗಿ: ಅನುಮಾನಾಸ್ಪದ ರೀತಿಯಲ್ಲಿ ಅಪ್ರಾಪ್ತೆಯೊಬ್ಬಳು ಮೃತಪಟ್ಟಿರುವ ಘಟನೆ ಕಲಬುರಗಿ ತಾಲೂಕಿನ ಪಾಣೆಗಾಂವ್ ಗ್ರಾಮದಲ್ಲಿ ನಡೆದಿದೆ.
ಪಾಯಲ್ (15) ಮೃತ ಹುಡುಗಿ. ನಿನ್ನೆ (ಅ.8) ಸಂಜೆ ಕಟ್ಟಿಗೆ ತರಲೆಂದು ಮನೆಯ ಹಿಂಭಾಗಕ್ಕೆ ತೆರಳಿದಾಗ ಹುಡುಗಿ ಮೃತಪಟ್ಟಿದ್ದಾಳೆ. ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಂದ ಇಬ್ಬರು ಯುವಕರು ವಿಷ ಕುಡಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಪಾಣೆಗಾಂವ್ ಗ್ರಾಮದ ಸುನೀಲ್ ಮತ್ತು ಆತನ ಸ್ನೇಹಿತ ವಿಷ ಕುಡಿಸಿದ್ದಾರೆಂದು ಆರೋಪಿಸಲಾಗಿದೆ. ಘಟನಾ ಸ್ಥಳಕ್ಕೆ ಫರಹತಬಾದ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನಿಖೆ ಆರಂಭವಾಗಿದ್ದು, ಪ್ರಕರಣ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. (ದಿಗ್ವಿಜಯ ನ್ಯೂಸ್)