

ಬೆಂಗಳೂರು: ಮಾಜಿ ಸಚಿವ ಹಾಗೂ ಹಿರಿಯ ರಾಜಕೀಯ ನಾಯಕ ಎಂ. ರಘುಪತಿ ಅವರು ಇಂದು (ಜೂನ್ 18) ಬೆಳಗ್ಗೆ 3 ಗಂಟೆ ಸುಮಾರಿಗೆ ವಿಧಿವಶರಾದರು.
ರಘುಪತಿ ಅವರ ಪಾರ್ಥೀವ ಶರೀರವನ್ನು ನಗರದ ಮಲ್ಲೇಶ್ವರಂನಲ್ಲಿರುವ ನಿವಾಸದಲ್ಲಿ ಇಡಲಾಗಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
1980ರಲ್ಲಿ ರಾಮಕೃಷ್ಣ ಹೆಗಡೆ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಂ. ರಘುಪತಿ ಅವರು ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ರಾಜ್ಯದ ಶಾಲೆಗಳಲ್ಲಿ ಮೊಟ್ಟ ಮೊದಲ ಬಾರಿಗೆ ಸಮವಸ್ತ್ರ ಪರಿಚಯಿಸಿದ್ದೇ ರಘುಪತಿ ಅವರು.