ಮಡಿಕೇರಿ ಲಾಡ್ಜ್​ನಲ್ಲಿ ನೇಣಿಗೆ ಶರಣಾದ ಮಂಗಳೂರು ಶಿಕ್ಷಣ ಇಲಾಖೆಯ ಸೂಪರಿಂಟೆಂಡೆಂಟ್​

Govt Work
Published on

ಕೊಡಗು: ಮಂಗಳೂರು ಶಿಕ್ಷಣ ಇಲಾಖೆಯ ಸೂಪರಿಂಟೆಂಡೆಂಟ್​ ನೇಣಿಗೆ ಶರಣಾಗಿರುವ ಘಟನೆ ಮಡಿಕೇರಿ ವಸತಿಗೃಹದಲ್ಲಿ ನಡೆದಿದೆ.

ಶಿವಾನಂದ್ (45) ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಇವರು ಮಂಗಳೂರು ದಕ್ಷಿಣ ವಿಭಾಗದ ಬಿಇಓ ಕಚೇರಿಯಲ್ಲಿ ಸೂಪರಿಂಟೆಂಡೆಂಟ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಮಡಿಕೇರಿಯ ಹಳೆಯ ಬಸ್ ನಿಲ್ದಾಣದ ಬಳಿಯಿರುವ ವಸತಿಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶಿವಾನಂದ್​ ಅವರು ಮಂಗಳೂರು ಬಜ್ಪೆ ಮೂಲದವರು. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಮಡಿಕೇರಿ ನಗರ ಠಾಣೆಯ ಪೊಲೀಸರು ಪರಿಶೀಲನೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಆತ್ಮಹತ್ಯೆ ಸುದ್ದಿ ತಿಳಿದ ಕೂಡಲೇ ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net