ವಿಚಾರಣೆಗೆ ಹೆದರಿ ಠಾಣೆಯ ಶೌಚಾಲಯದಲ್ಲಿ ಫಿನೈಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಪೇದೆ

Kolar Police
Published on

ಕೋಲಾರ: ಫಿನೈಲ್ ಕುಡಿದು ಪೊಲೀಸ್​ ಪೇದೆಯೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೋಲಾರದ ಮುಳಬಾಗಿಲು ನಗರ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ಗುರು ಪ್ರಸಾದ್ ಆತ್ಮಹತ್ಯೆಗೆ ಯತ್ನಿಸಿದ ಪೊಲೀಸ್ ಪೇದೆ. ಪ್ರಕರಣ ಒಂದರಲ್ಲಿ ಆರೋಪಿಗೆ ಸಹಾಯ ನೀಡಿರುವ ಆರೋಪ ಪೇದೆ ಮೇಲಿದೆ. ಇದರ ವಿಚಾರಣೆಗೆ ಹೆದರಿ ಠಾಣೆಯ ಆವರಣದಲ್ಲಿರುವ ಶೌಚಾಲಯದಲ್ಲಿ ಆತ್ಮಹತ್ಯೆ ಯತ್ನಿಸಿದ್ದಾರೆ.

ಫಿನೈಲ್​ ಕುಡಿದು ಅಸ್ವಸ್ಥಗೊಂಡಿದ್ದ ಪೇದೆಯನ್ನು ಕೋಲಾರದ ಆರ್​.ಎಲ್​. ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಪ್ರಾಣಕ್ಕೆ ಯಾವುದೇ ತೊಂದರೆ ಇಲ್ಲ ಎಂದು ವೈದ್ಯರು ಹೇಳಿದ್ದಾರೆ.

ಮುಳಬಾಗಿಲು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net