ಮಹಿಳೆಯೊಂದಿಗೆ ಅಸಭ್ಯ ವರ್ತನೆ ಆರೋಪ: ವ್ಯಕ್ತಿಯೊಬ್ಬನಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ

Koppal Man
Published on

ಕೊಪ್ಪಳ: ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದನೆಂದು ವ್ಯಕ್ತಿಯೊಬ್ಬನಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿರುವ ಘಟನೆ ಕುಷ್ಟಗಿ ತಾಲೂಕು ಬೊಮ್ಮನಾಳ ಗ್ರಾಮದಲ್ಲಿ ನಡೆದಿದೆ.

ಪ್ರಕಾಶ ಪೂಜಾರ ಎಂಬ ವ್ಯಕ್ತಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಲಾಗಿದೆ. ಈ ದೃಶ್ಯವನ್ನು ಮೊಬೈಲ್​ನಲ್ಲಿ ಸೆರೆಹಿಡಿಯಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್​ ಆಗಿದೆ. ಮೆರವಣಿಗೆ ಮಾಡುವಾಗ ಮಹಿಳೆಯೊಬ್ಬಳು ಚಪ್ಪಲಿಯಿಂದ ಥಳಿಸಿರುವ ದೃಶ್ಯ ವಿಡಿಯೋದಲ್ಲಿದೆ.

ಚಪ್ಪಲಿಯಿಂದ ಥಳಿಸುತ್ತಲೇ ಮೆರವಣಿಗೆ ಮಾಡಲಾಗಿದೆ. ಸುಮಾರು ಎಂಟು ಜನ ಸೇರಿ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ್ದಾರೆ. ಇದರ ಮಧ್ಯೆ ದಲಿತ ವ್ಯಕ್ತಿ ಮೇಲೆ ಸವರ್ಣಿಯರಿಂದ ದೌರ್ಜನ್ಯ ಎಂಬ ಮರು ಆರೋಪವೂ ಕೇಳಿಬಂದಿದೆ. ಹನುಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net