

ಮೈಸೂರು: ಅನ್ವೇಷಣಾ ಸೇವಾ ಟ್ರಸ್ಟ್, ಅರಸು ಜಾಗೃತಿ ಅಕಾಡೆಮಿ ಚಾರಿಟಬಲ್ ಟ್ರಸ್ಟ್ ಫೆ.2 ರಂದು ಬೆಳಗ್ಗೆ 10.30ಕ್ಕೆ ಜೆಎಲ್ ಬಿ ರಸ್ತೆ. ಇಂಜಿನಿಯರುಗಳ ಸಂಸ್ಥೆ ಸಭಾಂಗಣದಲ್ಲಿ ಏರ್ಪಡಿಸಿರುವ ಕಾರ್ಯಕ್ರಮದಲ್ಲಿ ವಿಜಯವಾಣಿ ಮುಖ್ಯ ವರದಿಗಾರ ಆರ್.ಕೃಷ್ಣ, ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಸೇರಿದಂತೆ ಆರು ಮಂದಿಗೆ ಧ್ವನಿ ಕೊಟ್ಟ ದಣಿ ಪ್ರಶಸ್ತಿ ಪ್ರದಾನ ಮಾಡಲಿದೆ.
ಎಸ್.ಟಿ. ರವಿಕುಮಾರ್, ಕೆ. ನರಸಿಂಹಮೂರ್ತಿ, ಟಿ.ವಿ. ರಾಜೇಶ್ವರ್, ಎಂ.ಎ.ಶ್ರೀರಾಂ ಅವರಿಗೆ ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ಕ್ಷೇತ್ರದ ಧರ್ಮ ಪ್ರವತ್ರಕ ಡಾ.ಜಿ.ಭೀಮೇಶ್ವರ ಜೋಶಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸುವರು. ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಭಾವಚಿತ್ರಕ್ಕೆ ಶಾಸಕ ಡಾ.ಡಿ. ತಿಮ್ಮಯ್ಯಪುಷ್ಪಾರ್ಚನೆ ಮಾಡುವರು.ಅರಸು ಪತ್ರಿಕೆಯ ವಿಶೇಷ ಸಂಚಿಕೆಯನ್ನು ಅನ್ವೇಷಣಾ ಸೇವಾ ಟ್ರಸ್ಟ್ ಸಂಸ್ಥಾಪಕ ಅಮರನಾಥರಾಜೇ ಅರಸು ಬಿಡುಗಡೆ ಮಾಡುವರು. ಕಂಠೀರವ ಸ್ಟುಡಿಯೋ ಮಾಜಿ ಅಧ್ಯಕ್ಷೆ ವಿಜಯಲಕ್ಷ್ಮೀ ಅರಸು ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ಅರಸು ಜಾಗೃತಿ ಅಕಾಡೆಮಿ ಚಾರಿಟಬಲ್ ಟ್ರಸ್ಟಿನ ಉಪಾಧ್ಯಕ್ಷ ಎಚ್.ಎ. ವೆಂಕಟೇಶ್, ವಿಪ್ರ ಮುಖಂಡ ಕೆ.ರಘುರಾಂ ವಾಜಪೇಯಿ, ಅರಸು ಮಂಡಳಿ ಅಧ್ಯಕ್ಷ ಎಚ್.ಎಂ.ಟಿ. ಲಿಂಗರಾಜೇ ಅರಸು, ಚುಟುಕು ಸಾಹಿತ್ತಯ ಪರಿಷತ್ತ್ ಸಂಸ್ಥಾಪಕ ಡಾ.ಎಂಜಿಆರ್ ಅರಸು ಭಾಗವಹಿಸಲಿದ್ದಾರೆ.