ಸರಿಯಾಗಿ ಬೈಕ್ ಓಡಿಸಿ ಎಂದಿದ್ದೇ ತಪ್ಪಾಯ್ತಾ? ವೃದ್ಧ ಎನ್ನೋದನ್ನೂ ನೋಡದೇ ಯುವಕರಿಬ್ಬರಿಂದ ಹಲ್ಲೆ

Bike
Published on

ಮಂಡ್ಯ: ಸರಿಯಾಗಿ ಬೈಕ್ ಓಡಿಸಿ ಎಂದಿದ್ದೇ ತಪ್ಪಾಯ್ತಾ? ಹಿರಿಯ ವ್ಯಕ್ತಿ ಎಂಬುದನ್ನು ನೋಡದೇ ಇಬ್ಬರು ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಆತಂಕಕಾರಿ ಘಟನೆ ಹಾಡುಹಗಲಲ್ಲೇ ಮಂಡ್ಯ ತಾಲೂಕಿನ ಯಲಿಯೂರು ಬಳಿಯ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. ದುಷ್ಕರ್ಮಿಗಳು ಲಾಂಗ್ ಹಿಡಿದು ಹಲ್ಲೆ ಮಾಡಿದ್ದಾರೆ.

ತೂಬಿನಕೆರೆ ಗ್ರಾಮದ ಶಂಕರೇಗೌಡ (60) ಎಂಬುವರ ಮೇಲೆ ಹಲ್ಲೆ ಮಾಡಿದ್ದಾರೆ. ಇನ್ನೂ ಸರಿಯಾಗಿ ಮೀಸೆ ಚಿಗುರದ ಯುವಕರಿಂದಲೇ ರೌಡಿಸಂ ನಡೆದಿದೆ.

ಪುಂಡರು ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಬೈಕ್ ಓಡಿಸುತ್ತಿದ್ದರು. ಈ ವೇಳೆ ಬೈಕ್ ಸರಿಯಾಗಿ ಓಡಿಸಿ, ನಿಮ್ಮಿಂದ ಎಲ್ಲರಿಗೂ ತೊಂದರೆಯಾಗುತ್ತದೆ. ಈ ರೀತಿ ಓಡಿಸಿದ್ರೆ ಬೇರೆಯವರು ಸಾಯುತ್ತಾರೆ ಎಂದು ಶಂಕರೇಗೌಡ ಬುದ್ಧಿ ಹೇಳಿದ್ದರು. ಇಷ್ಟಕ್ಕೆ ಆಕ್ರೋಶಗೊಂಡು ದುಷ್ಟರು ಶಂಕರೇಗೌಡರನ್ನು ಅಡ್ಡಗಟ್ಟಿ ಲಾಂಗ್​ನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.

ಹಲ್ಲೆಯಿಂದ ಗಂಭೀರ ಗಾಯವಾಗಿರುವ ವ್ಯಕ್ತಿಗೆ ಮಿಮ್ಸ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹಲ್ಲೆ ನಡೆಸುತ್ತಿರುವ ದೃಶ್ಯವನ್ನು ವಾಹನ ಸವಾರರೊಬ್ಬರು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ. ಮಂಡ್ಯದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net