ಭಾರಿ ಮಳೆಗೆ ಅವಾಂತರ ಸೃಷ್ಟಿ ಹಿನ್ನೆಲೆ ಬೆಂಗಳೂರು-ಮೈಸೂರು ಹೆದ್ದಾರಿ ಬಂದ್​: ಬದಲಿ ಮಾರ್ಗ ಹೀಗಿದೆ...

National Highway
Published on

ಮಂಡ್ಯ: ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಸಂಚಾರವನ್ನು ಮುಂಜಾಗ್ರತ ಕ್ರಮವಾಗಿ ಬಂದ್ ಮಾಡಲಾಗಿದೆ.

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಿರುವ ಪೋಲೀಸರು ಬೆಂಗಳೂರಿನಿಂದ ಮೈಸೂರಿಗೆ ತೆರಳುವ ವಾಹನಗಳನ್ನು ರುದ್ರಾಕ್ಷಿಪುರ, ತೈಲೂರು, ಕೆ.ಹೊನ್ನಲಗೆರೆ, ಕೆ.ಬೆಳ್ಳೂರು, ಕೆ.ಎಂ.ದೊಡ್ಡಿ, ಮಂಡ್ಯ ಮಾರ್ಗವಾಗಿ ಮೈಸೂರಿಗೆ ತೆರಳಬೇಕಾಗಿದೆ.

ಇನ್ನು ಮೈಸೂರಿನಿಂದ ಬೆಂಗಳೂರಿಗೆ ತೆರಳುವ ವಾಹನಗಳನ್ನು ಮಂಡ್ಯ ನಗರದ ಫ್ಯಾಕ್ಟರಿ ಸರ್ಕಲ್ ಮೂಲಕ ಕೆ.ಎಂ.ದೊಡ್ಡಿ, ತೊರಕಾಡನಹಳ್ಳಿ, ಅಥವಾ ಮಳವಳ್ಳಿ, ಹಲಗೂರು ಕನಕಪುರ ಮಾರ್ಗವಾಗಿ ತೆರಳುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net