ಸುಮಲತಾರಿಗೆ ಮನವಿ ಸಲ್ಲಿಸಿದ್ರೂ ಬಗೆಹರಿಯದ ಸಮಸ್ಯೆ; ಪ್ರತಾಪ್​ ಸಿಂಹ ಮೊರೆ ಹೋದ ಮಂಡ್ಯ ಗ್ರಾಮಸ್ಥರು

Sumalatha
Published on

ಮಂಡ್ಯ: ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸಂಸದೆ ಸುಮಲತಾ ಅಂಬರೀಷ್​ ಅವರಿಗೆ ಮನವಿ ಸಲ್ಲಿಸಿದ್ರೂ ಸಮಸ್ಯೆ ಪರಿಹಾರವಾಗದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮಾಜಿ ಶಾಸಕ ರಮೇಶ್ ಬಂಡಿಸಿದ್ದೆಗೌಡ ನೇತೃತ್ವದಲ್ಲಿ ಶ್ರೀರಂಗಪಟ್ಟಣ ತಾಲೂಕಿನ ಗೌಡಹಳ್ಳಿ ಗ್ರಾಮಸ್ಥರು ಮೈಸೂರು ಸಂಸದ ಪ್ರತಾಪ್​ ಸಿಂಹ ಮೊರೆ ಹೋಗಿದ್ದಾರೆ.

ಬೆಂಗಳೂರು-ಮೈಸೂರು ಹೆದ್ದಾರಿಯ ಗೌಡಹಳ್ಳಿ ಬಳಿ ಅಂಡರ್ ಪಾಸ್ ನಿರ್ಮಾಣ ಮಾಡಿಕೊಡುವಂತೆ ಸಂಸದ ಪ್ರತಾಪ್ ಸಿಂಹಗೆ ಗೌಡಹಳ್ಳಿ ಗ್ರಾಮಸ್ಥರು ಮನವಿ ಸಲ್ಲಿಸಿದ್ದಾರೆ.

ಅಂಡರ್ ಪಾಸ್ ಇಲ್ಲದಿರುವುದರಿಂದ ಬಸ್​ಗಾಗಿ ಮತ್ತೊಂದು ಊರಿಗೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ, ಕೃಷಿ ಚಟುವಟಿಗಳಿಗೂ ಸಾಕಷ್ಟು ತೊಂದರೆಯಾಗಿದೆ. ಹೀಗಾಗಿ ಸಮಸ್ಯೆಯನ್ನು ಪರಿಹರಿಸುವಂತೆ ಸಾಕಷ್ಟು ಬಾರಿ ಗ್ರಾಮಸ್ಥರು ಪ್ರತಿಭಟನೆ ಮಾಡಿದ್ದಾರೆ. ಆದರೂ ಈವರೆಗೆ ಸಮಸ್ಯೆ ಪರಿಹಾರವಾಗಿಲ್ಲ. ಇದರಿಂದ ಮೈಸೂರು ಸಂಸದ ಪ್ರತಾಪ್ ಸಿಂಹಗೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಗ್ರಾಮಸ್ಥರ ಮನವಿಗೆ ಸ್ಪಂದಿಸಿರುವ ಸಂಸದ ಪ್ರತಾಪ್​ ಸಿಂಗ್​ ಸಮಸ್ಯೆ ಪರಿಹಾರ ಮಾಡುವ ಭರವಸೆ ನೀಡಿದ್ದಾರೆ. ಈ ವೇಳೆ ಸಂಸದರಿಗೆ ಗೌಡಹಳ್ಳಿ ಗ್ರಾಮಸ್ಥರು ಜೈಕಾರ ಕೂಗಿ ಹಾರ ಹಾಕಿ ಗೌರವಿಸಿದರು. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net