

ಮಂಗಳೂರು: ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ಮದ್ದಡ್ಕದಲ್ಲಿ ನಿನ್ನೆ (ಜ.17) ರಾತ್ರಿ ನಡೆದಿದೆ.
ಮೃತ ಯುವಕರನ್ನು ನಾವೂರು ನಿವಾಸಿಗಳಾದ ಮಿಸ್ಪಾಯಿಲ್ (20) ಹಾಗೂ ಆಸ್ಪಾನ್ (19) ಎಂದು ಗುರುತಿಸಲಾಗಿದೆ. ಡಿಕ್ಕಿ ಹೊಡೆದ ರಭಸಕೆ ತೀವ್ರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಹಾಗೂ ಸಹಸವಾರ ಸ್ಥಳದಲ್ಲಿಯೇ ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ.
ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. (ದಿಗ್ವಿಜಯ ನ್ಯೂಸ್)