ಬೆಳ್ಳಂಬೆಳಗ್ಗೆ ಮಂಗಳೂರಿನಲ್ಲಿ ಮೊಳಗಿದ ಗುಂಡಿನ ಸದ್ದು: ಕೊಲೆ ಪ್ರಕರಣದ ಆರೋಪಿಗಳ ಕಾಲಿಗೆ ಗುಂಡೇಟು

Rowdy Sheeterv
Published on

ಮಂಗಳೂರು: ಬೆಳ್ಳಂಬೆಳಗ್ಗೆ ಮಂಗಳೂರಿನ ಹೊರ ವಲಯದಲ್ಲಿ ಗುಂಡಿನ ಸದ್ದು ಮೊಳಗಿದೆ. ರೌಡಿಶೀಟರ್ ರಾಜಾ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಮುಲ್ಕಿ ಪ್ರದೇಶದ ಬಳಿ ಸಿಸಿಬಿ ಪೊಲೀಸರು ಫೈರಿಂಗ್ ನಡೆಸಿದ್ದಾರೆ.

ಆರೋಪಿಗಳ ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದು, ಆತ್ಮರಕ್ಷಣೆಗಾಗಿ ಇಬ್ಬರು ಆರೋಪಿಗಳ ಕಾಲಿಗೆ ಮಂಗಳೂರು ಸಿಸಿಬಿ ಪೊಲೀಸರು ಗುಂಡು ಹಾರಿಸಿದ್ದಾರೆ.

ಆರೋಪಿಗಳಾದ ಅರ್ಜುನ್ ಮೂಡುಶೆಡ್ಡೆ, ಮನೋಜ್ ಅಲಿಯಾಸ್ ಬಿಂದಾಸ್ ಮನೋಜ್​ ಕಾಲಿಗೆ ಗುಂಡೇಟು ಬಿದ್ದಿದೆ. ಮೊದಲು ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಲಾಯಿತು. ಬಳಿಕ ಎರಡು ಸುತ್ತು ಆರೋಪಿಗಳ ಮೇಲೆ ಫೈರಿಂಗ್ ಮಾಡಲಾಯಿತು.

ಘಟನೆಯಲ್ಲಿ ಪೊಲೀಸ್​ ಸಿಬ್ಬಂದಿಗೂ ಗಾಯಗಳಾಗಿದೆ. ಗಾಯಗೊಂಡಿರುವ ಆರೋಪಿಗಳು ಹಾಗೂ ಸಿಬ್ಬಂದಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net