ಹುಡ್ಗಿಯನ್ನು ಮದ್ವೆ ಮಾಡಿಕೊಡಲು ಒಪ್ಪದ ಕುಟುಂಬಕ್ಕೆ ಪಾಗಲ್ ಪ್ರೇಮಿ ಮಾಡಿದ್ದನ್ನು ಕೇಳಿದ್ರೆ ಶಾಕ್​ ಆಗ್ತೀರಾ!

Accused Arrest
Published on

ಮಂಗಳೂರು: ಹುಡುಗಿಯನ್ನು ಮದುವೆ ಮಾಡಿಕೊಡುವಂತೆ ಒತ್ತಾಯಿಸಿ ಪಾಗಲ್ ಪ್ರೇಮಿಯೊಬ್ಬ ತನ್ನ ಸಹಚರರೊಂದಿಗೆ ಸೇರಿ ಮನೆಗೆ ನುಗ್ಗಿ ದಾಂಧಲೆ ಮಾಡಿರುವ ಘಟನೆ ಮಂಗಳೂರು ಹೊರವಲಯದ ಶಕ್ತಿನಗರದಲ್ಲಿ ನಡೆದಿದೆ.

ಮೇ.30 ರಾತ್ರಿ ಮನೆಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ತಲವಾರು ಮತ್ತು ರಾಡ್​ನಿಂದ ಮನೆಯಲ್ಲಿದ್ದ ಟಿವಿ, ಸೋಫಾ ಸೇರಿದಂತೆ ಅನೇಕ ಸಾಮಾನುಗಳನ್ನು ಹಾಳುಗೆಡವಿದ್ದಾರೆ. ಮಗಳನ್ನು ಮದುವೆ ಮಾಡಿಕೊಡುವುದಿಲ್ಲ ಎಂದು ಹೇಳಿದ್ದಕ್ಕೆ ಆರೋಪಿ ಇಷ್ಟೆಲ್ಲ ಅವಾಂತರ ಸೃಷ್ಟಿಸಿದ್ದಾನೆ.

ಘಟನೆಯ ಕುರಿತು ಕಂಕನಾಡಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾರ್ಯಾಚರಣೆಗೆ ಇಳಿದ ಮಂಗಳೂರು ಪೊಲೀಸರು ಪ್ರಕರಣ ಸಂಬಂಧ 7 ಪುಡಿ ರೌಡಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ಬಂಟ್ವಾಳ ತಾಲೂಕಿನ ಬಾರೆಕ್ಕಾಡು ನಿವಾಸಿ ಹೇಮಂತ್ (22), ರೌಡಿಶೀಟರ್ ರಂಜಿತ್ (28), ಉರ್ವಾ ಸ್ಟೋರ್ ನಿವಾಸಿ ಅವಿನಾಶ್ (23), ಕೊಟ್ಟಾರ ಚೌಕಿಯ ಪ್ರಜ್ವಲ್(24), ಕೋಡಿಬೆಂಗ್ರೆ ನಿವಾಸಿ ದೀಕ್ಷಿತ್ (21), ಉರ್ವಾ ಸ್ಟೋರಿನ ಧನುಷ್ (19), ಕುಂಜತ್ ಬೈಲಿನ ಯತಿರಾಜ್ (23) ಎಂದು ಗುರುತಿಸಲಾಗಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net