

ಬೆಂಗಳೂರು: ಮರಾಠ ಅಭಿವೃದ್ಧಿ ಮಂಡಳಿ ಅಧ್ಯಕ್ಷರನ್ನಾಗಿ ಮಾರುತಿರಾವ್ ಮುಳೆ ಅವರನ್ನು ನೇಮಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು.
ಸದಾಶಿವನಗರದಲ್ಲಿ ಕರ್ನಾಟಕ ಮರಾಠ ಅಸೋಸಿಯೇಷನ್ ಏರ್ಪಡಿಸಿದ್ದ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವದಲ್ಲಿ ಪಾಲ್ಗೊಂಡ ನಂತರ ಮಾತನಾಡಿದ ಅವರು ಮರಾಠ ಅಭಿವೃದ್ಧಿ ಮಂಡಳಿ ನೂತನ ಅಧ್ಯಕ್ಷರ ನೇಮಕ ಆದೇಶ ಹೊರಡಿಸಲಾಗುವುದು. ಸಮುದಾಯದ ಅಭಿವೃದ್ಧಿಗೆ ಅಗತ್ಯ ನೆರವು ನೀಡುವುದಾಗಿ ಬೊಮ್ಮಾಯಿ ಭರವಸೆ ನೀಡಿದರು.
ಇದಕ್ಕೂ ಮುನ್ನ ಛತ್ರಪತಿ ಶ್ರೀ ಶಿವಾಜಿ ಮಹಾರಾಜರ ಜಯಂತೋತ್ಸವ ಕಾರ್ಯಕ್ರಮಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. ಸಮಾರಂಭದಲ್ಲಿ ಗೋಸಾಯಿ ಮಹಾಸಂಸ್ಥಾನ ಮಠದ ಮಂಜುನಾಥ ಭಾರತಿ ಸ್ವಾಮೀಜಿ, ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್. ಅಶ್ವಥ್ ನಾರಾಯಣ , ಮಾಜಿ ಸಚಿವ ಪಿಜಿಆರ್ ಸಿಂಧ್ಯಾ, ಮಾಜಿ ಶಾಸಕ ಎಂಜಿ ಮೂಳೆ, ಮರಾಠಾ ಸಮುದಾಯದ ಮುಖಂಡ ಮನೋಜ ಕುಮಾರ ಮತ್ತು ಇತರರು ಸಮಾರಂಭದಲ್ಲಿ ಉಪಸ್ಥಿತರಿದ್ದರು.