

ಮೈಸೂರು: ಈ ಬಾರಿ ದಸರಾ ಮಹೋತ್ಸವ ಉದ್ಘಾಟನಾ ಸಮಾರಂಭ ಸೇರಿದಂತೆ ಅರಮನೆ ವೇದಿಕೆಯ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಜಂಬೂ ಸವಾರಿ ಕಾರ್ಯಕ್ರಮಗಳನ್ನು ಸರ್ಕಾರವೇ ಹೊರತಂದಿರುವ ವೆಬ್‌ಸೈಟ್, ಫೇಸ್‌ಬುಕ್ ಹಾಗೂ ಯೂಟ್ಯೂಬ್ ನೇರಪ್ರಸಾರದಲ್ಲಿ ವೀಕ್ಷಿಸಬಹುದಾಗಿದೆ.
ಕಾರ್ಯಕ್ರಮಗಳ ವೇಳಾಪಟ್ಟಿಯನ್ನು www.mysoredasara.gov.in ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ. ಕಾರ್ಯಕ್ರಮಗಳು ನಡೆಯುವ ವೇಳೆ ನೇರಪ್ರಸಾರವನ್ನು ಮುಂದಿನ ಲಿಂಕ್‌ಗಳಲ್ಲಿ ನೀವು ನೋಡಬಹುದಾಗಿದೆ.
ಫೇಸ್‌ಬುಕ್ ಲಿಂಕ್: https://www.facebook.com/mysorevarthe/live/
ಯೂಟ್ಯೂಬ್ ಲಿಂಕ್: https://tinyurl.com/mysurudasara2021
ವೆಬ್‌ಸೈಟ್ ಲಿಂಕ್: https://mysoredasara.gov.in/
ದಸರಾ ಕಾರ್ಯಕ್ರಮಗಳನ್ನು ವರ್ಚುವಲ್ ಆಗಿ ವೀಕ್ಷಿಸಲು ಈ ಲಿಂಕ್ ಬಳಸಬಹುದಾಗಿದ್ದು, ನಿಮ್ಮ ಸ್ನೇಹಿತರು, ಬಂಧುಗಳಿಗೂ ಈ ಲಿಂಕ್ ಶೇರ್ ಮಾಡಲು ಮೈಸೂರು ಜಿಲ್ಲಾಡಳಿತ ಕೋರಿದೆ.