ಫಿಲ್ಮ್ ಸಿಟಿಗೆ ಪುನೀತ್ ರಾಜ್​ಕುಮಾರ್ ಹೆಸರಿಟ್ಟರೆ ಸಂತೋಷ: ನಟ ಶಿವರಾಜ್​ಕುಮಾರ್​

puneethrajkumar shivarajkuamr
Published on

ಮೈಸೂರು: ಫಿಲ್ಮ್ ಸಿಟಿಗೆ ಪುನೀತ್ ರಾಜ್​ಕುಮಾರ್ ಹೆಸರಿಟ್ಟರೆ ಸಂತೋಷ ಎಂದು ನಟ ಶಿವರಾಜ್​ಕುಮಾರ್​ ಹೇಳಿದರು.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜೇಮ್ಸ್​ ಚಿತ್ರದ ಡಬ್ಬಿಂಗ್ ಮಾಡುವ ವೇಳೆ ನನಗೆ ತುಂಬಾ ನೋವಾಗ್ತಾ ಇತ್ತು. ಅಪ್ಪು ಇಲ್ಲದ ಹುಟ್ಟು ಹಬ್ಬ ಆಚರಣೆ ತುಂಬಾ ದುಃಖದ ವಿಚಾರವಾಗಿದೆ. ಆದರೆ, ಏನಿದೆ ಅದನ್ನು ನೋಡಿಕೊಂಡು ಮುಂದೆ ಹೋಗ್ತಾ ಇರಬೇಕು‌ ಎಂದು ಹೇಳಿದರು.

ಹುಟ್ಟುಹಬ್ಬಕ್ಕೆ ಇಬ್ಬರೂ ಗಿಫ್ಟ್​ಗಳನ್ನು ಶೇರ್ ಮಾಡ್ತಾ ಇದ್ವಿ. ಅಪ್ಪುಗೆ ಬ್ರಾಂಡ್ ವಾಚ್ , ಬೆಲ್ಟ್, ಗಾಗಲ್ ಸಾಕಷ್ಟು ಕೊಟ್ಟಿದ್ದೇನೆ. ಅಪ್ಪು ಎಲ್ಲರ ಹೃದಯದಲ್ಲಿ ಇದ್ದಾನೆ‌. ಅವನ ಸಿನಿಮಾ ಬಿಡುಗಡೆ ಆಗಿದೆ. ಅವನಿಲ್ಲದ ವೇಳೆ ಸಿನಿಮಾ ಬಿಡುಗಡೆ ಹೆಚ್ಚು ದುಃಖ ತರುತ್ತಿದೆ ಎಂದು ಶಿವಣ್ಣ ಭಾವುಕರಾದರು.

ಫಿಲ್ಮ್ ಸಿಟಿಗೆ ಪುನೀತ್ ರಾಜ್ ಕುಮಾರ್ ಹೆಸರಿಡುವ ವಿಚಾರವಾಗಿ ಪ್ರತಿಕ್ರಿಯಿಸಿ, ಪುನೀತ್ ಹೆಸರಿಟ್ಟರೆ ಸಂತೋಷ ಆಗುತ್ತೆ. ಕುಟುಂಬ ಸದಸ್ಯನಾಗಿ ನಾನು ಆ ರೀತಿಯ ಒತ್ತಾಯ ಮಾಡಲ್ಲ. ಅಭಿಮಾನಿಗಳು ಅಭಿಮಾನದಿಂದ ಹೇಳ್ತಿದ್ದಾರೆ. ಅದರಂತೆ ಪುನೀತ್ ಹೆಸರಿಟ್ಟರೆ ಸಂತೋಷ‌. ಚಿತ್ರರಂಗಕ್ಕೆ ದುಡಿದವರು ಸಾಕಷ್ಟು ಮಂದಿ ಇದ್ದಾರೆ ಅವರ ಹೆಸರನ್ನೂ ಇಡಬಹುದು ಎಂದು ಹೇಳಿದರು. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net