ಪಾಕಿಸ್ತಾನ ಪರ ಮಾತನಾಡಿದ ಆಡಿಯೋ ವೈರಲ್: ಯುವಕನನ್ನು ವಶಕ್ಕೆ ಪಡೆದ ದೊಡ್ಡಬಳ್ಳಾಪುರ ಪೊಲೀಸರು

Imran
Published on

ಬೆಂಗಳೂರು: ಪಾಕಿಸ್ತಾನದ ಬಗ್ಗೆ ಯುವಕನೊಬ್ಬ ಮಾತನಾಡಿರುವ ಆಡಿಯೋ ವೈರಲ್ ಆಗಿದ್ದು, ಯುವಕನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಸಮಾಜದಲ್ಲಿ ಅಶಾಂತಿ ಸೃಷ್ಟಿಸುವಂತೆ ಮಾತನಾಡಿರುವ ಆಡಿಯೋ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿದೆ. ಈ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ನಗರ ಠಾಣೆಯ ಪೊಲೀಸರು ಇಮ್ರಾನ್ ಹೆಸರಿನ ಯುವಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಇಮ್ರಾನ್​ ಸಾಮಾಜಿಕ ಜಾಲತಾಣದಲ್ಲಿ ಪಾಕಿಸ್ತಾನದ ಪರ ಸಂದೇಶ ಹಾಕಿದ್ದ. ಅದನ್ನು ನೋಡಿದ ಯುವಕನೋರ್ವ ಆತನಿಗೆ ಕರೆ ಮಾಡಿ ಪ್ರಶ್ನಿಸಿದ್ದ. ಯುವಕ ಪ್ರಶ್ನಿಸಿದಕ್ಕೆ ಗರಂ ಆದ ಇಮ್ರಾನ್, ಪಾಕಿಸ್ತಾನದ ಪರವಾಗಿ ಮಾತನಾಡಿದ್ದ. ದೇಶದ ಬಗ್ಗೆ ಹಗುರವಾಗಿ ಮಾತನಾಡಿ, ಸಮಾಜದಲ್ಲಿ ಶಾಂತಿ ಕೆದಡುವ ರೀತಿಯಲ್ಲಿ ಮಾತನಾಡಿದ್ದ.

ಈ ಹಿನ್ನೆಲೆಯಲ್ಲಿ ಸಂಭಾಷಣೆಯ ಆಡಿಯೋ ಸಮೇತ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಗೆ ಹಿಂದೂಪರ ಸಂಘಟನೆಯ ಸದಸ್ಯರು ದೂರು ನೀಡಿದ್ದರು. ಈ ಹಿನ್ನೆಲೆ ಆಡಿಯೋ ಬಗ್ಗೆ ತನಿಖೆ ನಡೆಸಿ, ಶಾಂತಿ ಕದಡುವ ರೀತಿಯಲ್ಲಿ ಮಾತನಾಡಿದ್ದ ಯುವಕನ ದೊಡ್ಡಬಳ್ಳಾಪುರ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net