

ಮಂಗಳೂರು: ಬೆಳ್ಳಾರೆ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯ ಬಂಧನವಾಗಿದೆ ಎಂದು ಹೇಳಲಾಗುತ್ತಿದೆ.
ಆರೋಪಿಯು ಬೆಳ್ಳಾರೆಯ ಬೂಡು ಪ್ರದೇಶದ ನಿವಾಸಿಯಾಗಿದ್ದು, ವಿಚಾರಣೆ ವೇಳೆ ಕೊಲೆ ಮಾಡಿರುವ ಬಗ್ಗೆ ಮಾಹಿತಿ ನೀಡಿದ್ದಾನೆ. ಸದ್ಯ ಆರೋಪಿಯನ್ನು ಪೊಲೀಸರು ತೀವ್ರವಾಗಿ ವಿಚಾರಣೆ ನಡೆಸುತ್ತಿರುವುದಾಗಿ ದಿಗ್ವಿಜಯ ನ್ಯೂಸ್ಗೆ ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.
ಘಟನೆ ಹಿನ್ನೆಲೆ ಏನು?
ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಮಂಗಳವಾರ ನಡೆದಿದೆ. ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಪ್ರವೀಣ್ ನೆಟ್ಟಾರು ಅವರನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಮೃತ ಪ್ರವೀಣ್ ನೆಟ್ಟಾರು ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿದ್ದರು. (ದಿಗ್ವಿಜಯ ನ್ಯೂಸ್)