ಅನಾರೋಗ್ಯದಿಂದ ಬಳಲುತ್ತಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಎಂ. ನಾರಾಯಣ ಗೌಡ ನಿಧನ

IPS narayana Gowd
Published on

ಬೆಂಗಳೂರು: ನಿವೃತ್ತ ಐಪಿಎಸ್ ಅಧಿಕಾರಿ ಎಂ. ನಾರಾಯಣ ಗೌಡ ನಿನ್ನೆ ರಾತ್ರಿ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ.

ಕೇಂದ್ರ ವಿಭಾಗ ಡಿಸಿಪಿ ಎಂ.ಎನ್ ಅನುಚೇತ್ ಅವರ ತಂದೆ ನಾರಾಯಣ ಗೌಡ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಮೃತ ನಾರಾಯಣ ಗೌಡ ಬೆಂಗಳೂರು ನಗರ ಅಪರಾಧ ವಿಭಾಗ(ಸಿಸಿಬಿ) ಜಂಟಿ ಆಯುಕ್ತ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಸ್.ಪಿ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದರು. ಇಂದು ಇವರ ಹುಟ್ಟೂರು ಕೋಲಾರದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net