ಸ್ಕೂಟಿ-ಕಾರು ಮುಖಾಮುಖಿ ಡಿಕ್ಕಿ: ಸಂಸದ ಸಂಗಣ್ಣ ಕರಡಿ ಸಹೋದರ ಬಸಣ್ಣ ಕರಡಿ ಸಾವು

Basanna Karadi
Published on

ಕೊಪ್ಪಳ: ಕಾರು ಮತ್ತು ಸ್ಕೂಟಿ ನಡುವೆ ಸಂಭವಿಸಿದ ಅಪಘಾತದಲ್ಲಿ ಕೊಪ್ಪಳ ಸಂಸದ ಸಂಗಣ್ಣ ಕರಡಿ ಸಹೋದರ ಬಸಣ್ಣ ಕರಡಿ (68) ಮೃತಪಟ್ಟಿದ್ದಾರೆ.

ಕೊಪ್ಪಳ ತಾಲೂಕು ಟಣಕನಕಲ್ ಗ್ರಾಮದ ಬಳಿ ಘಟನೆ ನಡೆದಿದೆ. ಬಸಣ್ಣ ಕರಡಿ ಅವರು ಸ್ಕೂಟಿ ರೈಡ್ ಮಾಡುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ಬಸಣ್ಣ ಕರಡಿಯವರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಕೆ.ಎಸ್​. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಅಪಘಾತ ಸಂಬಂಧ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net