ಪ್ರಖ್ಯಾತ ಪತ್ರಿಕಾ ಛಾಯಾಗ್ರಾಹಕ ಡಿ.ಸಿ. ನಾಗೇಶ್ ನಿಧನ

DC Nagesh
Published on

ಬೆಂಗಳೂರು: ಪ್ರಖ್ಯಾತ ಪತ್ರಿಕಾ ಛಾಯಾಗ್ರಾಹಕ ಡಿ.ಸಿ. ನಾಗೇಶ್ (66) ಇಂದು ಬೆಳಿಗ್ಗೆ 5.30 ಕ್ಕೆ ಬಸವನಗುಡಿಯ ಅವರ ಮನೆಯಲ್ಲಿ ನಿಧನರಾಗಿದ್ದಾರೆ.

ನಾಲ್ಕು ದಶಕಗಳಿಂದ ಫ್ರೀಲಾನ್ಸ್ ಪತ್ರಿಕಾ ಛಾಯಾಗ್ರಾಹಕರಾಗಿ ಕೆಲಸ ಮಾಡುತ್ತಿದ್ದರು. ಕನ್ನಡ ಸಿನಿಮಾ ಜಗತ್ತಿನಲ್ಲಿ ಅತ್ಯುತ್ತಮ ಛಾಯಾಗ್ರಾಹಕರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದರು. ಸ್ಯಾಂಡಲ್‌ವುಡ್‌ನ ಎಲ್ಲ ಹಿರಿಯ, ಕಿರಿಯ ಕಲಾವಿದರು ಹಾಗೂ ತಂತ್ರಜ್ಞರ ಜತೆ ಅವರಿಗೆ ನಿಕಟ ಒಡನಾಟ ಇತ್ತು. ಚಿತ್ರರಂಗದ ಗಣ್ಯರು ನಾಗೇಶ್​ ಅವರ ನಿವಾಸಕ್ಕೆ ಆಗಮಿಸಿ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ.

ಇಂದು ಸಂಜೆ 5 ಗಂಟೆಗೆ ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net