ಹಿಜಾಬ್ ಧರಿಸಲು ಅವಕಾಶ ನೀಡದಿದ್ದಕ್ಕೆ ಪರೀಕ್ಷೆ ಬಹಿಷ್ಕರಿಸಿ ಹೊರ ನಡೆದ ವಿದ್ಯಾರ್ಥಿನಿಯರು

Hijab
Published on

ಶಿವಮೊಗ್ಗ: ಶಿವಮೊಗ್ಗದಲ್ಲಿ ಹಿಜಾಬ್​ ವಿವಾದ ತಾರಕಕ್ಕೇರಿದೆ. ಶಾಲೆ-ಕಾಲೇಜುಗಳಲ್ಲಿ ಯಾವುದೇ ಧಾರ್ಮಿಕ ಬಟ್ಟೆಗಳನ್ನು ಧರಿಸುವಂತಿಲ್ಲ ಎಂದು ಹೈಕೋರ್ಟ್​ ಮಧ್ಯಂತರ ಆದೇಶ ಹೊರಡಿಸಿದ್ದರೂ ಕೂಡ ಅದನ್ನು ಪಾಲಿಸದೇ ಇಂದು ಶಾಲೆಗೆ ಹುಡುಗಿಯರು ಹಿಜಾಬ್​ ಧರಿಸಿ ಬಂದಿದ್ದರು.

ಶಿವಮೊಗ್ಗದ ಮೇನ್ ಮಿಡ್ಲ್ ಸ್ಕೂಲ್​ನಲ್ಲಿ ಈ ಘಟನೆ ನಡೆದಿದ್ದು, ಕೋರ್ಟ್​ ಆದೇಶವನ್ನು ವಿದ್ಯಾರ್ಥಿನಿಯರಿಗೆ ಮನವರಿಕೆ ಮಾಡಿದರೂ ಅದಕ್ಕೆ ಒಪ್ಪದ ವಿದ್ಯಾರ್ಥಿನಿಯರು ಶಾಲೆಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಲಿಲ್ಲ ಅಂತಾ ಪರೀಕ್ಷೆಯನ್ನೇ ಬಹಿಷ್ಕರಿಸಿದ್ದಾರೆ.

ಶಾಲೆಯಲ್ಲಿ ಇಂದು ಎಸ್​ಎಸ್​ಎಲ್​ಸಿ ಪೂರ್ವಸಿದ್ಧತಾ ಪರೀಕ್ಷೆ ನಡೆಯುತ್ತಿತ್ತು. ಆದರೆ, ಪರೀಕ್ಷೆ ವೇಳೆ ಹಿಜಾಬ್ ಧರಿಸಲು ಶಿಕ್ಷಕರು ಬಿಡಲಿಲ್ಲ. ಈ ಕಾರಣಕ್ಕೆ 13 ವಿದ್ಯಾರ್ಥಿನಿಯರು ಪರೀಕ್ಷೆಯನ್ನೇ ಬಹಿಷ್ಕರಿಸಿ, ಮನೆಗೆ ತೆರಳಿದರು. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net